Dailyhunt Logo
  • Light mode
    Follow system
    Dark mode
    • Play Story
    • App Story
ಭೋವಿ ನಿಗಮದ ಅಧ್ಯಕ್ಷರ ಬೀದರ್ ಜಿಲ್ಲಾ ಪ್ರವಾಸ, ಯೋಜನೆಗಳ ಪ್ರಗತಿ ಪರಿಶೀಲನೆ

ಭೋವಿ ನಿಗಮದ ಅಧ್ಯಕ್ಷರ ಬೀದರ್ ಜಿಲ್ಲಾ ಪ್ರವಾಸ, ಯೋಜನೆಗಳ ಪ್ರಗತಿ ಪರಿಶೀಲನೆ

ಬೀದರ್: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಅವರು ಜೂ.23ರಂದು ಬೀದರ್ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ ಜಿಲ್ಲೆಗೆ ಆಗಮಿಸುವ ಅವರು, 11 ಗಂಟೆಗೆ ಬೀದರ್ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಭೋವಿ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಬಳಿಕ ಭೋವಿ ಸಮುದಾಯದ ಮುಖಂಡರೊಂದಿಗೆ ಸಂವಾದ ನಂತರ ಪತ್ರಿಕಾಗೋಷ್ಠಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಭಾಲ್ಕಿ ತಾಲ್ಲೂಕಿನ ಮಳಚಾಪುರ ಗ್ರಾಮದಲ್ಲಿರುವ ಭೋವಿ ಕಾಲೊನಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಮಂಡಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260623-33-2085822727

Dailyhunt
Disclaimer: This content has not been generated, created or edited by Dailyhunt. Publisher: Prajavani