Dailyhunt Logo
  • Light mode
    Follow system
    Dark mode
    • Play Story
    • App Story
ಬೀದರ್ ಗೋರನಳ್ಳಿ ಕಾಲೇಜಿನಲ್ಲಿ ನಶೆ ಮುಕ್ತ ಯುವ ಸಂಕಲ್ಪ ಅಭಿಯಾನ

ಬೀದರ್ ಗೋರನಳ್ಳಿ ಕಾಲೇಜಿನಲ್ಲಿ ನಶೆ ಮುಕ್ತ ಯುವ ಸಂಕಲ್ಪ ಅಭಿಯಾನ

ಗೋರನಳ್ಳಿ(ಜನವಾಡ): ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಶರಣಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ವಿಕಸಿತ ಭಾರತಕ್ಕಾಗಿ ನಶೆ ಮುಕ್ತ ಯುವ ಸಂಕಲ್ಪ ಅಭಿಯಾನ ಕಾರ್ಯಕ್ರಮ ಈಚೆಗೆ ಜರುಗಿತು.

ವಿಕಸಿತ ಭಾರತಕ್ಕಾಗಿ ಯುವಕರು ಮಾದಕ ವ್ಯಸನಗಳಿಂದ ದೂರವಿರಬೇಕು.

ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬೇಕು ಎಂದು ಕಾರ್ಯಕ್ರಮ ಉದ್ಘಾಟಿಸಿದ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಬೀದರ್ ಉಪ ವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ, ಮೇರಾ ಯುವ ಭಾರತ್‍ನ ಜಿಲ್ಲಾ ಯುವ ಅಧಿಕಾರಿ ನಿಖಿಲಕುಮಾರ, ಕಾಲೇಜು ಪ್ರಾಚಾರ್ಯ ಸತೀಶ್ ಪ್ರತಾಪುರ, ಎನ್.ಎಸ್.ಎಸ್. ವಿಶೇಷ ಅಧಿಕಾರಿ ರವಿಂದ್ರಕುಮಾರ ಇದ್ದರು.

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಇರುವ ಪ್ರತಿಜ್ಞೆಗೈದರು. ಕಾಲೇಜಿನಲ್ಲಿ ಅಳವಡಿಸಿದ್ದ ಎಲ್‍ಇಡಿ ಪರದೆಯಲ್ಲಿ ಅತಿಥಿಗಳು, ಗಣ್ಯರು ಹಾಗೂ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಂದ ನಡೆದ ಅಭಿಯಾನದ ವರ್ಚುಯಲ್ ಚಾಲನೆ ಕಾರ್ಯಕ್ರಮ ವೀಕ್ಷಣೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260807-33-1353907147

Dailyhunt
Disclaimer: This content has not been generated, created or edited by Dailyhunt. Publisher: Prajavani