Dailyhunt Logo
  • Light mode
    Follow system
    Dark mode
    • Play Story
    • App Story
ಬೀದರ್‌ನಲ್ಲಿ ಎಸ್‌ಐಆರ್ ಜಾಗೃತಿಗೆ ವಿದ್ಯಾರ್ಥಿಗಳ ಬೃಹತ್ ಜಾಥಾ

ಬೀದರ್‌ನಲ್ಲಿ ಎಸ್‌ಐಆರ್ ಜಾಗೃತಿಗೆ ವಿದ್ಯಾರ್ಥಿಗಳ ಬೃಹತ್ ಜಾಥಾ

ಬೀದರ್‌: ಜಿಲ್ಲಾಡಳಿತ, ಸ್ವೀಪ್ ಸಮಿತಿ ಹಾಗೂ ವಿವಿಧ ಕಾಲೇಜುಗಳ ಚುನಾ ವಣಾ ಸಾಕ್ಷರತಾ ಸಂಘಗಳ ಸಹ ಯೋಗದಲ್ಲಿ ನಗರದಲ್ಲಿ ಸ್ವೀಪ್ ಅಭಿ ಯಾನ, ಎಸ್‌ಐಆರ್ ಜಾಗೃತಿ ಮೂ ಡಿಸಲು ವಿದ್ಯಾರ್ಥಿಗಳಿಂದ ಜನಜಾಗೃತಿ ಜಾಥಾ ನಡೆಸಲಾಯಿತು.

ನಗರದ ವಿವಿಧ ಭಾಗಗಳ ಹತ್ತು ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಸ್ವೀಪ್‌ ಸಮಿತಿಯ ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ವಿವಿಧೆಡೆಯಿಂದ ಆಗಮಿಸಿದ ವಿದ್ಯಾರ್ಥಿಗಳು ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿ ಸಿದರು. ಅಲ್ಲಿಂದ ಪ್ರಮುಖ ಮಾರ್ಗಗಳ ಮೂಲಕ ನೆಹರೂ ಕ್ರೀಡಾಂಗಣದವರೆಗೆ ಜಾಗೃತಿ ಜಾಥಾ ನಡೆಸಿದರು. ದಾರಿಯುದ್ದಕ್ಕೂ ಘೋಷಣೆ ಹಾಕಿದರು. ಭಿತ್ತಿ ಫಲಕಗಳನ್ನು ಪ್ರದರ್ಶಿಸಿದರು. ಅಂಗಡಿ, ಹೋಟೆಲ್‌ಗಳವರಿಗೆ ಕರಪತ್ರ ವಿತರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ,'ಅರ್ಹ ಮತದಾರರನ್ನು ಸೇರಿಸಲು, ಮೃತ ಅಥವಾ ಸ್ಥಳಾಂತರಗೊಂಡ ಮತದಾರರನ್ನು ಅಳಿಸಲು ಮತ್ತು ಮತದಾರರ ಪಟ್ಟಿಯಲ್ಲಿನ ನಮೂದಿಸಿದ ತಪ್ಪು ವಿವರಗಳಿದ್ದರೆ ಸರಿಪಡಿಸಲು ಎಸ್‌ಐಆರ್ ಒಂದು ಪ್ರಮುಖ ಪ್ರಕ್ರಿಯೆಯಾಗಿದೆ' ಎಂದು ಹೇಳಿದರು.

ಎಸ್‌ಐಆರ್‌, ಸ್ವಚ್ಛ ಮತದಾರ ಪಟ್ಟಿಗೆ ಅಡಿಪಾಯವಾಗಿದೆ. ಪ್ರತಿಯೊಬ್ಬ ಅರ್ಹ ಯುವಕ/ಯುವತಿಯರು ನೋಂದಾಯಿಸಿಕೊಳ್ಳಬೇಕು. ಮತದಾರರ ಪಟ್ಟಿಯ ನಿಖರತೆ ಮತ್ತು ಪ್ರಜಾಪ್ರಭುತ್ವ ಭಾಗವಹಿಸುವಿಕೆಯ ನಡುವಿನ ಸಂಬಂಧವನ್ನು ವಿವರಿಸಿದರು.

ಸ್ವೀಪ್ ನೋಡಲ್ ಅಧಿಕಾರಿ ಗೌತಮ್ ಅರಳಿ, ಬೀದರ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಡಿಡಿಪಿಯು ಚಂದ್ರಕಾಂತ ಶಹಾಬಾದಕರ್, ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ಖದೀರ್, ವಿಸ್ಡಂ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಆಸಿಫೋದ್ದಿನ್ ಭಾಗವಹಿಸಿದ್ದರು.

ಶಾಹೀನ್ ಕಾಲೇಜು, ಆಲ್ ಅನ್ ಕಾಲೇಜು, ವಿಸ್ಡಂ ಕಾಲೇಜು, ಕೇಂಬ್ರಿಡ್ಜ್ ಕಾಲೇಜು, ಸರ್ಕಾರಿ ಪಿಯು ಕಾಲೇಜು, ಡೈಮಂಡ್ ಕಾಲೇಜು, ಸಿದ್ದಿ ವಿನಾಯಕ ಕಾಲೇಜು, ಮಾತಾ ಮಾಣಿಕೇಶ್ವರಿ ಕಾಲೇಜು, ಸಾಯಿ ಸ್ಫೂರ್ತಿ ಕಾಲೇಜು, ಕರ್ನಾಟಕ ಕಾಲೇಜು, ಎನ್‌ಎಫ್‌ಎಚ್‌ಎಸ್ ಕಾಲೇಜು, ಸಿದ್ದಾರ್ಥ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-33-1708534356

Dailyhunt
Disclaimer: This content has not been generated, created or edited by Dailyhunt. Publisher: Prajavani