ಬೆಂಗಳೂರು: ಬಿಹಾರದ ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯಲಿದೆ. ರಾಜ್ಯದ ಎಲ್ಲ ಮತದಾರರು ಎಸ್‌ಐಆರ್‌ಗೆ ಒಳಪಡಲಿದ್ದು, ಮತದಾರರ ಗುರುತಿನ ಚೀಟಿ, ಮತದಾರರ ಪಟ್ಟಿ ಮತ್ತು ಮತಗಟ್ಟೆಗಳು ಬದಲಾಗಲಿವೆ.ರಾಜ್ಯದಲ್ಲಿ ನಡೆಯಲಿರುವ ಎಸ್‌ಐಆರ್ ಕುರಿತಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಬುಧವಾರ ಪತ್ರಕರ್ತರಿಗೆ ಕಾರ್ಯಾಗಾರ ನಡೆಸಿತು.