Dailyhunt
ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದರು: ಶಾಸಕ ಶ್ರೀಮಂತ ಪಾಟೀಲ್

ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದರು: ಶಾಸಕ ಶ್ರೀಮಂತ ಪಾಟೀಲ್

ಬೆಳಗಾವಿ: 'ನಾನು ಕಾಂಗ್ರೆಸ್‌ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್‌ ಕೊಟ್ಟಿದ್ದು ನಿಜ. ಎಷ್ಟು ಹಣ ಬೇಕೆಂದು ಕೇಳಿದ್ದರು. ಒಂದು ಪೈಸೆಯನ್ನೂ ಪಡೆಯುವುದಿಲ್ಲ, ಸರ್ಕಾರ ಬಂದ ನಂತರ ಒಳ್ಳೆಯ ಸ್ಥಾನಮಾನ ಕೊಡಿ ಚೆನ್ನಾಗಿ ನಿರ್ವಹಿಸಿ ಜನಸೇವೆ ಮಾಡುತ್ತೇನೆ ಎಂದು ಹೇಳಿದ್ದೆ' ಎಂದು ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡಿದರು.

ಜಿಲ್ಲೆಯ ಕಾಗವಾಡ ತಾಲ್ಲೂಕಿನ ಐನಾಪೂರದಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, 'ಹಣ ಪಡೆಯದೆ ಬಿಜೆಪಿ ಸೇರಿದ್ದೇನೆ. ಯಾವ ಕಾರಣದಿಂದ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಕೊಟ್ಟಿಲ್ಲವೋ ಗೊತ್ತಿಲ್ಲ. ಮುಂದಿನ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆದಾಗ ಖಂಡಿತವಾಗಿಯೂ ಅವಕಾಶ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ' ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: Prajavani