ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ 'ತಬಾಹಿ' ವಿಡಿಯೊ ಸಾಂಗ್ ಬಿಡುಗಡೆಯಾಗಿದೆ. ಇಂದು (ಜುಲೈ 8) ಬೆಳಿಗ್ಗೆ 11.33ಕ್ಕೆ ಬಿಡುಗಡೆಯಾದ ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ರೋಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.
ತಬಾಹಿ ಹಾಡಿನ ವಿಡಿಯೊ ಬಿಡುಗಡೆ ಬಗ್ಗೆ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದರು.
ಈಗಾಗಲೇ ಲಿರಿಕಲ್ ಸಾಂಗ್ ಮೂಲಕವೇ ಅಭಿಮಾನಿಗಳ ಗಮನ ಸೆಳೆದಿದ್ದ ತಬಾಹಿ ವಿಡಿಯೊ ನೋಡಿದವರು ಅಚ್ಚರಿಗೊಂಡಿದ್ದಾರೆ.
ಇದೇ ಮೊದಲ ಬಾರಿಗೆ ಯಶ್ ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಸದ್ಯ 'ತಬಾಹಿ' ಹಾಡಿನ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಯಶ್ ಹಾಗೂ ಕಿಯಾರಾ ನಡುವಿನ ಬೋಲ್ಡ್ ದೃಶ್ಯಗಳು ಆಕರ್ಷಿಸಿವೆ.
ಯುವ ತಂತ್ರಜ್ಞರ ಹುಡುಕಾಟದಲ್ಲಿ ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ KVN ಸಂಸ್ಥೆಹೊಸ ಪ್ರತಿಭೆಗಳಿಗೆ, ಕಥೆಗಾರರಿಗೆ ಪ್ರಿಯಾ ಸುದೀಪ್ ಕಡೆಯಿಂದ ಸುವರ್ಣ ಅವಕಾಶಚಿತ್ರದಲ್ಲಿ ಯಶ್ ಅವರು ದ್ವಿಪಾತ್ರದಲ್ಲಿ ನಟಿಸಿದ್ದು, ಇವರ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಗೀತು ಮೋಹನ್ದಾಸ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ರಾಜೀವ್ ರವಿ ಅವರು ಛಾಯಾಚಿತ್ರಗ್ರಹಣ ಮಾಡಿದ್ದಾರೆ.
ಕಳೆದ ಮಾರ್ಚ್ 19ರಂದೇ ತೆರೆಕಾಣಬೇಕಿದ್ದ ಸಿನಿಮಾ ಅಂತಿಮವಾಗಿ ಆಗಸ್ಟ್ 26ರಂದು ಬಿಡುಗಡೆಯಾಗುತ್ತಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾದ ಈ ಚಿತ್ರವು ಹಿಂದಿ, ತಮಿಳು, ತೆಲುಗು ಸೇರಿ ಹಲವು ಭಾಷೆಗಳಿಗೆ ಡಬ್ ಆಗಿದೆ.

