Dailyhunt Logo
  • Light mode
    Follow system
    Dark mode
    • Play Story
    • App Story
ಬೀದರ್‌: ಬ್ಯಾಂಕಿಂಗ್‌ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಬೀದರ್‌: ಬ್ಯಾಂಕಿಂಗ್‌ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಬೀದರ್‌: ಬ್ಯಾಂಕಿಂಗ್, ಎಸ್‌ಎಸ್‌ಸಿ ಹಾಗೂ ಆರ್‌ಆರ್‌ಬಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಮುಕ್ತ ಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ತಿಳಿಸಿದ್ದಾರೆ.

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಮತ್ತು ವಿವಿಧ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತಯಾರಿ ಆರಂಭಿಸಿರುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು 45 ದಿನಗಳ ತರಬೇತಿಯನ್ನು ಹಮ್ಮಿಕೊಂಡಿದೆ.

ತರಬೇತಿಯಲ್ಲಿ ಬ್ಯಾಂಕಿಂಗ್ ತಜ್ಞರು, ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು, ವಿವಿಧ ವಿಷಯಗಳ ಪರಿಣತರು ಹಾಗೂ ಅಧಿಕಾರಿಗಳು ಮಾರ್ಗದರ್ಶನ ನೀಡಲಿದ್ದಾರೆ. ಇಲ್ಲಿ ಪಡೆಯುವ ತರಬೇತಿಯು ಎಸ್‌ಡಿಎ ಹಾಗೂ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹಾಯಕವಾಗಲಿದೆ. ಆಸಕ್ತರು ನ. 9ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ದೂ.ಸಂ. 0821-2515944 ಅಥವಾ ಮೊ.ಸಂ. 9964760090 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

261104-33-334472587

Dailyhunt
Disclaimer: This content has not been generated, created or edited by Dailyhunt. Publisher: Prajavani