Dailyhunt Logo
  • Light mode
    Follow system
    Dark mode
    • Play Story
    • App Story
ಚಾಮರಾಜನಗರ: 9 ಹೊಸ ಪ್ರಕರಣ, 8 ಮಂದಿ ಗುಣಮುಖ

ಚಾಮರಾಜನಗರ: 9 ಹೊಸ ಪ್ರಕರಣ, 8 ಮಂದಿ ಗುಣಮುಖ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಒಂಬತ್ತು ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಎಂಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ 102 ಮಂದಿ ಸೋಂಕಿತರಿದ್ದು, ಈ ಪೈಕಿ 59 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ವರದಿಯಾದ ಕೋವಿಡ್‌ ಪ್ರಕರಣಗಳ ಸಂಖ್ಯೆ 6,311ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 6,081ಕ್ಕೆ ತಲುಪಿದೆ. 108 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಕೋವಿಡ್‌ಯೇತರ ಕಾಣರಣಗಳಿಂದ ಮೃತಪಟ್ಟಿದ್ದಾರೆ.

ಶುಕ್ರವಾರ 968 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 960 ಮಂದಿಯ ವರದಿ ನೆಗಟಿವ್‌ ಬಂದಿವೆ. ಎಂಟು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani