Dailyhunt Logo
  • Light mode
    Follow system
    Dark mode
    • Play Story
    • App Story
ಚಾಮರಾಜನಗರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ವಿತರಣೆ

ಚಾಮರಾಜನಗರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ವಿತರಣೆ

ಚಾಮರಾಜನಗರ: ಬಸ್ ಅಪಘಾತದಲ್ಲಿ ಮೃತಪಟ್ಟಿದ್ದ ಇಬ್ಬರು ಮಹಿಳೆಯರ ಕುಟುಂಬ ಸದಸ್ಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಶುಕ್ರವಾರ ತಲಾ ₹ 10 ಲಕ್ಷ ಮೌಲ್ಯದ ಪರಿಹಾರ ಧನದ ಚೆಕ್ ವಿತರಿಸಲಾಯಿತು.

2025ರ ಅ.19ರಂದು ಕೊಳ್ಳೇಗಾಲ ಘಟಕಕ್ಕೆ ಸೇರಿದ ಬಸ್ ಅಪಘಾತಕ್ಕೀಡಾದ ಸಂದರ್ಭದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ರತ್ನಮ್ಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

2025ರ ಮೇ 22ರಂದು ಗುಂಡ್ಲುಪೇಟೆ ಘಟಕಕ್ಕೆ ಸೇರಿದ ಬಸ್‌ನಲ್ಲಿ ಸಂಚರಿಸುತ್ತಿದ್ದ ಅಮ್ಮಣ್ಣಮ್ಮ ಬಸ್‌ನ ಮುಂಭಾಗದ ಬಾಗಿಲಿನಿಂದ ಕೆಳಗೆ ಬಿದ್ದು ಗಂಭೀರಗಾಯಗೊಂಡು ಚಿಕಿತ್ಸೆಗೆ ಸ್ಪಂದಿಸದೆ ಮೇ 24ರಂದು ಮೃತಪಟ್ಟಿದ್ದರು.

ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸುವಾಗ ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ ನಿಗಮದ ಅಪಘಾತ ಪರಿಹಾರ ನಿಧಿ ನೀಡಲಾಗುತ್ತಿದ್ದು, ಅದರಂತೆ ತಲಾ ₹ 10 ಲಕ್ಷದ ಪರಿಹಾರ ಧನದ ಚೆಕ್‌ ಅನ್ನು ರತ್ನಮ್ಮ ಅವರ ವಾರಸುದಾರರಾದ ಹನೂರು ತಾಲ್ಲೂಕಿನ ಹಲಗಾಪುರದ ಬಸವಣ್ಣ ಅವರಿಗೆ ಹಾಗೂ ಅಮ್ಮಣ್ಣಮ್ಮ ಅವರ ವಾರಸುದಾರರಾದ ಗುಂಡ್ಲುಪೇಟೆ ತಾಲ್ಲೂಕಿನ ಪುತ್ತನಪುರದ ನಾಗಲಾಂಬಿಕಾ ಅವರಿಗೆ ಕೆಎಸ್‍ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-37-535874190

Dailyhunt
Disclaimer: This content has not been generated, created or edited by Dailyhunt. Publisher: Prajavani