Dailyhunt Logo
  • Light mode
    Follow system
    Dark mode
    • Play Story
    • App Story
ಚಳ್ಳಕೆರೆ ಅರಣ್ಯ ಪ್ರದೇಶದಲ್ಲಿ ಯುವಕ ಆತ್ಮಹತ್ಯೆ

ಚಳ್ಳಕೆರೆ ಅರಣ್ಯ ಪ್ರದೇಶದಲ್ಲಿ ಯುವಕ ಆತ್ಮಹತ್ಯೆ

ಚಳ್ಳಕೆರೆ: ತಾಲ್ಲೂಕಿನ ಇಮಾಂಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಗೊರ್ಲಕಟ್ಟೆ ಗ್ರಾಮದ ಎ. ಮಹೇಶ್ (30) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇವರಿಗೆ ಪತ್ನಿ ಹಾಗೂ 9 ತಿಂಗಳ ಹೆಣ್ಣು ಮಗು ಇದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಯಾರಿಗಾದರೂ ಖಿನ್ನತೆ ಇದ್ದರೆ, ಇಲ್ಲವೆ ಆತ್ಮಹತ್ಯೆಯ ಮನೋಭಾವ ಕಾಡುತ್ತಿದ್ದರೆ ಈ ಕೆಳಗಿನ ಸಹಾಯವಾಣಿಗೆ ಸಂಪರ್ಕಿಸಿ: ಟೆಲಿಮನಸ್‌-14416 ಅಥವಾ ಸಹಾಯ್‌- 080 25497777, 98864 44075)

261104-44-898947465

Dailyhunt
Disclaimer: This content has not been generated, created or edited by Dailyhunt. Publisher: Prajavani