ಚಳ್ಳಕೆರೆ: 'ತಾಲ್ಲೂಕಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಕಲಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸುಂದರ ಭಾರತ ಪ್ರತಿಷ್ಠಾನ ಹಾಗೂ ನೀಡ್ ಬೇಸ್ ಇಂಡಿಯಾ ಸಂಸ್ಥೆಯ ವತಿಯಿಂದ ಒಟ್ಟು 64 ಸಾವಿರ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗಿದೆ' ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.
ಸುರೇಶ್ ತಿಳಿಸಿದರು.
ತಾಲ್ಲೂಕಿನ ಬೋಸೆದೇವರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.
ಬಿಆರ್‌ಸಿ ಮಂಜುಬಾಬು ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಮಹತ್ವದ ಶೈಕ್ಷಣಿಕ ಪ್ರೋತ್ಸಾಹ ದೊರೆತಿದ್ದು, ವಿದ್ಯಾರ್ಥಿಗಳಿಗೆ ಕಲಿಕೆಗೆ ಹೆಚ್ಚಿನ ಚೈತನ್ಯ ನೀಡಿದೆ ಎಂದರು.
ಮೊದಲ ಹಂತದಲ್ಲಿ ಬೆಂಗಳೂರಿನ ಸುಂದರ ಭಾರತ ಪ್ರತಿಷ್ಠಾನದ ವತಿಯಿಂದ 7 ಸಾವಿರ ನೋಟ್ ಪುಸ್ತಕಗಳನ್ನು ನೀಡಲಾಗಿತ್ತು. ಎರಡನೇ ಹಂತದಲ್ಲಿ ನೀಡ್ ಬೇಸ್ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ 57 ಸಾವಿರ ನೋಟ್ ಪುಸ್ತಕಗಳನ್ನು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ತಾಲ್ಲೂಕಿನ ಅಂದಾಜು 13 ಸಾವಿರ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ನೆರವು ತಲುಪಿದೆ ಎಂದು ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ಆರ್. ಮಾರುತೇಶ್ ತಿಳಿಸಿದರು.
ಶಿಕ್ಷಣಕ್ಕೆ ಅಗತ್ಯವಾದ ಪರಿಕರಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಂದರ ಭಾರತ ಪ್ರತಿಷ್ಠಾನದ ಮುಖ್ಯಸ್ಥ ಪ್ರತಾಪ್ ಪರಾಶರ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಕ್ಷೇತ್ರ ಸಮನ್ವಯಾಧಿಕಾರಿ ಮಂಜುಬಾಬು, ಬಡ್ತಿ ಮುಖ್ಯ ಶಿಕ್ಷಕ ಆರ್.ಮಾರುತೇಶ್, ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.
261104-44-277394090

