ಚಿಮಕೋಡ್ (ಜನವಾಡ): ಬೀದರ್ ತಾಲ್ಲೂಕಿನ ಚಿಮಕೋಡ್ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಕಾರ್ಯಕ್ರಮ ಈಚೆಗೆ ನಡೆಯಿತು.
ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು.
ಯುವಕರು ಅವರನ್ನು ಮಾದರಿಯಾಗಿಸಿಕೊಳ್ಳಬೇಕು ಎಂದು ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ರಹೀಂಖಾನ್ ಹೇಳಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ ರಾಯಣ್ಣ ಅವರ ತತ್ವಗಳನ್ನು ಎಲ್ಲರೂ ಪಾಲಿಸಬೇಕು ಎಂದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ರಾಜ್ಯ ಅಧ್ಯಕ್ಷ ರಾಜಶೇಖರ ದೊಡ್ಡಣ್ಣ ಮೌರ್ಯ ಮೂರ್ತಿ ಅನಾವರಣಗೊಳಿಸಿದರು.
ಮಚ್ಚೇಂದ್ರನಾಥ ಮಹಾರಾಜ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಎನ್.ಎಸ್.ಎಸ್.ಕೆ. ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಟೊಳ್ಳೆ, ಮುಖಂಡರಾದ ಈಶ್ವರಸಿಂಗ್ ಠಾಕೂರ್, ಬಾಬುರಾವ್ ಮಲ್ಕಾಪುರೆ, ಬಸವರಾಜ ಮಾಳಗೆ, ಶಿವರಾಜ ಮಲ್ಕಾಪುರೆ, ರವಿ ದುರ್ಗೆ, ವಿನೋದಕುಮಾರ ಅಪ್ಪೆ, ಲೋಕೇಶ್ ಮರ್ಜಾಪುರ, ತುಳಸಿರಾಮ ಉಚ್ಚಾ, ಮಾರುತಿ ಶಿವಬರೆ, ಶರಣು ಟೊಳ್ಳೆ, ಮೋಹನ್ ಟೊಳ್ಳೆ, ಬಾಷುಮಿಯ, ಶ್ರೀಕಾಂತ ಬಿರಾದಾರ, ಸೋಮನಾಥ ಕಂದಗೂಳೆ, ಸಂಜು ದಡ್ಡೆ ಮತ್ತಿತರರು ಇದ್ದರು.
ಇದಕ್ಕೂ ಮುನ್ನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಗ್ರಾಮದಲ್ಲಿ ಕಲಾ ತಂಡಗಳೊಂದಿಗೆ 100 ಮೀಟರ್ ಉದ್ದದ ಕನ್ನಡ ಬಾವುಟದ ಅದ್ದೂರಿ ಮೆರವಣಿಗೆ ಜರುಗಿತು.
261104-33-294461600

