ಮಂಡ್ಯ: ಸಮಾಜದಲ್ಲಿ ತುಡಿತಕ್ಕೆ ಒಳಗಾಗಿರುವ ಸಮುದಾಯಗಳಿಗೆ ಅಂಬೇಡ್ಕರ್ ಅವರು ಸಂವಿಧಾನದ ರಚಿಸುವ ಮೂಲಕ ನ್ಯಾಯ ಒದಗಿಸಿಕೊಟ್ಟಿದ್ದಾರೆ ಎಂದು ಜಲಸಂಪನ್ಮೂಲ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ನಗರದ ಸಮಾನ ಮನಸ್ಕರ ವೇದಿಕೆ ವತಿಯಿಂದ ಈಚೆಗೆ ನಡೆದ ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಕುಮಾರ್ ಕೊಪ್ಪ ಅವರನ್ನು ಸನ್ಮಾನಿಸಿ ಮಾತನಾಡಿದರು.
'ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ವಿವಿಧ ಮಂಡಳಿಗಳಿಗೆ ದಲಿತ ಸಮುದಾಯದವರನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಕುಮಾರ್ ಕೊಪ್ಪ ಅವರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಮಾಡಿದ್ದು ಅವರ ಜೊತೆ ಎಲ್ಲರೂ ಬೆಂಬಲಕ್ಕೆ ನಿಲ್ಲುವ ಮೂಲಕ ಕೆಲಸ ಮಾಡೋಣ' ಎಂದರು.
ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ಕಾಂಗ್ರೆಸ್ ಭವನ ಆಗುತ್ತಿದೆ. ಇದರ ಸದ್ಬಳಕೆ ಆಗಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡೋಣ ಎಂದು ಸಲಹೆ ನೀಡಿದರು.
ಶಾಸಕ ಪಿ.ರವಿಕುಮಾರ್, 'ಮುಡಾ' ಅಧ್ಯಕ್ಷ ಬಿ.ಪಿ.ಪ್ರಕಾಶ್, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮುಖಂಡರಾದ ಚಂದ್ರಹಾಸ್, ದೇವರಾಜ್ ಕೊಪ್ಪ, ಕ್ರಾಂತಿ ಸಿಂಹ, ಶ್ರೀಧರ್, ನಾರಾಯಣಸ್ವಾಮಿ ಇದ್ದರು.
261104-40-1717664338

