Dailyhunt Logo
  • Light mode
    Follow system
    Dark mode
    • Play Story
    • App Story
ದೆಹಲಿ ಪ್ರತಿಭಟನೆ: ಕಮ್ಯೂನಿಸ್ಟ್‌ ನಾಯಕರು, ತುಷಾರ್ ಗಾಂಧಿ ಪೊಲೀಸರ ವಶಕ್ಕೆ

ದೆಹಲಿ ಪ್ರತಿಭಟನೆ: ಕಮ್ಯೂನಿಸ್ಟ್‌ ನಾಯಕರು, ತುಷಾರ್ ಗಾಂಧಿ ಪೊಲೀಸರ ವಶಕ್ಕೆ

ನವದೆಹಲಿ: ಜಂತರ್ ಮಂತರ್ ಪ್ರದೇಶದಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಬೇಬಿ ಮತ್ತು ಹಿರಿಯ ನಾಯಕಿ ಬೃಂದಾ ಕಾರಟ್ ಸೇರಿದಂತೆ ಎಡಪಂಥೀಯ ನಾಯಕರನ್ನು ದೆಹಲಿ ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್ ಕಡೆಗೆ ತೆರಳುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಪ್ರತಿಭಟನೆಯನ್ನು ತಡೆದರು.

ಪರಿಸ್ಥಿತಿ ಕೈಮೀರಿ ಹೋಗದಂತೆ ತಡೆಯಲು ದೆಹಲಿ ಪೊಲೀಸರು ಬೇಬಿ, ಬೃಂದಾ ಕಾರಟ್ ಹಾಗೂ ಇತರ ನಾಯಕರನ್ನು ವಶಕ್ಕೆ ತೆಗೆದುಕೊಂಡು ಪೊಲೀಸ್ ವಾಹನಗಳಲ್ಲಿ ಕರೆದೊಯ್ದರು.

ತುಷಾರ್ ಗಾಂಧಿ ವಶಕ್ಕೆ...

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್‌ ಜನತಾ ಪಾರ್ಟಿ' (ಸಿಜೆಪಿ) ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಇಲ್ಲಿನ ಮೈದಾನವೊಂದರಲ್ಲಿ ಪ್ರತಿಭಟನೆಗೆ ಕರೆಕೊಟ್ಟಿದ್ದ ಸಾಮಾಜಿಕ ಕಾರ್ಯಕರ್ತ ತುಷಾರ್ ಗಾಂಧಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ತುಷಾರ್ ಗಾಂಧಿ ಸೇರಿದಂತೆ ನೂರಾರು ಜನರನ್ನು ಮುಂಬೈ ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರನ್ನು ಬಾಂದ್ರಾದಲ್ಲಿ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani