ನವದೆಹಲಿ: ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನ ಮಾಲೀಕನನ್ನು ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ.
ಮಾಲೀಕನ ಕುರಿತ ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಸ್ಫೋಟಗೊಂಡ ಹುಂಡೈ ಐ20 ಹ್ಯುಂಡೈ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು.
ಇದೊಂದು ಆತ್ಮಾಹುತಿ ಬಾಂಬ್ ದಾಳಿಯೇ ಎಂಬ ವಿಚಾರವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸ್ಫೋಟದ ಪರಿಣಾಮ 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.
ರಾಷ್ಟ್ರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ದೆಹಲಿ- ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ: ಕೆಂಪುಕೋಟೆ ಬಳಿ ರಕ್ತದೋಕುಳಿ; 12 ಸಾವುದೆಹಲಿ: ರಾಷ್ಟ್ರದ ರಾಜಧಾನಿಯಲ್ಲಿ ಈ ಹಿಂದೆ ನಡೆದ ಪ್ರಮುಖ ಸ್ಫೋಟಗಳು...
