Dailyhunt Logo
  • Light mode
    Follow system
    Dark mode
    • Play Story
    • App Story
ದೆಹಲಿ ಸ್ಫೋಟ ಪ್ರಕರಣ: ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯ ಡಿಎನ್‌ಎ ಪರೀಕ್ಷೆ

ದೆಹಲಿ ಸ್ಫೋಟ ಪ್ರಕರಣ: ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯ ಡಿಎನ್‌ಎ ಪರೀಕ್ಷೆ

ಶ್ರೀನಗರ: ನವದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಕಾರು ಚಲಾಯಸುತ್ತಿದ್ದ ಚಾಲಕನ ತಾಯಿಯನ್ನು ಡಿಎನ್‌ಎ ಪರೀಕ್ಷೆಗಾಗಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಿಂದ ಪೊಲೀಸರು ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಸ್ಫೋಟದ ಸ್ಥಳದಲ್ಲಿ ಪತ್ತೆಯಾದ ಶಂಕಿತನ ದೇಹದ ಭಾಗಗಳನ್ನು ಸಂಗ್ರಹಿಸಿದ್ದು, ಶಂಕಿತನ ಡಿಎನ್‌ಎಗೆ ಆತನ ತಾಯಿ ಎನ್ನಲಾದ ಮಹಿಳೆಯ ಡಿಎನ್‌ಎ ಹೊಂದಾಣಿಕೆ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲು ಆಕೆಯನ್ನು ಕರೆದೊಯ್ದಿದ್ದೇವೆ'ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಪಾರ್ಕಿಂಗ್ ಪ್ರದೇಶದ ಬಳಿ ಸೊಮವಾರ ಸಂಭವಿಸಿದ ಸ್ಫೋಟದಲ್ಲಿ ಬಳಸಲಾದ ಹುಂಡೈ ಐ20 ಕಾರನ್ನು ಡಾ. ಉಮರ್ ನಬಿ ಎಂಬಾತ ಚಾಲನೆ ಮಾಡುತ್ತಿದ್ದನು ಎಂದು ಹೇಳಲಾಗಿದ್ದು, ಈ ವಿಧ್ವಂಸಕ ಕೃತ್ಯದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಆತ ಪುಲ್ವಾಮಾದ ಕೊಯಿಲ್ ಗ್ರಾಮದವನು ಎಂದೂ ಅವರು ತಿಳಿಸಿದ್ದಾರೆ.

ಶಂಕಿತನ ಇಬ್ಬರು ಸಹೋದರರೂ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟ ಗೊಂಡ ಕಾರಿನ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

Delhi blast: Mother of man driving car called for DNA test in J-K's Pulwama

ದೆಹಲಿ ಸ್ಫೋಟ ಪ್ರಕರಣ: ಕಾರು ಚಕಾಯಿಸುತ್ತಿದ್ದ ಶಂಕಿತನ ತಾಯಿಗೆ ಡಿಎನ್‌ಎ ಪರೀಕ್ಷೆ

ಶ್ರೀನಗರ: ನವದೆಹಲಿಯ ಕೆಂಪು ಕೋಟೆ ಬಳಿ ಕಾರಿನ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಕಾರು ಚಲಾಯಸುತ್ತಿದ್ದ ಚಾಲಕನ ತಾಯಿಯನ್ನು ಡಿಎನ್‌ಎ ಪರೀಕ್ಷೆಗಾಗಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಿಂದ ಪೊಲೀಸರು ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಸ್ಫೋಟದ ಸ್ಥಳದಲ್ಲಿ ಪತ್ತೆಯಾದ ಶಂಕಿತನ ದೇಹದ ಭಾಗಗಳನ್ನು ಸಂಗ್ರಹಿಸಿದ್ದು, ಶಂಕಿತನ ಡಿಎಸ್‌ಎಗೆ ಆತನ ತಾಯಿ ಎನ್ನಲಾದ ಮಹಿಳೆ ಡಿಎನ್‌ಎಗೆ ಹೊಂದಾಣಿಕೆ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲು ಆಕೆಯನ್ನು ಕರೆದೊಯ್ದಿದ್ದೇವೆ'ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಪಾರ್ಕಿಂಗ್ ಪ್ರದೇಶದ ಬಳಿ ಸಂಭವಿಸಿದ ಸ್ಫೋಟದಲ್ಲಿ ಬಳಸಲಾದ ಹುಂಡೈ ಐ20 ಕಾರನ್ನು ಡಾ. ಉಮರ್ ನಬಿ ಎಂವಾತ ಚಾಲನೆ ಮಾಡುತ್ತಿದ್ದನು ಎಂದು ಹೇಳಲಾಗಿದ್ದು, ಈ ವಿಧ್ವಂಸಕ ಕೃತ್ಯದಲ್ಕಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಆತ ಪುಲ್ವಾಮಾದ ಕೊಯಿಲ್ ಗ್ರಾಮದವರು ಎಂದೂ ಅವರು ತಿ:ಳಿಸಿದ್ದಾರೆ.

ಶಂಕಿತನ ಇಬ್ಬರು ಸಹೋದರರೂ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದಲ್ಲಿ ಭಾಗಿಯಾಗಿರುವ ಕಾರಿನ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದ ಮೂವರು ವ್ಯಕ್ತಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಸ್ಫೋಟ: ಕಾರು ಓಡಿಸುತ್ತಿದ್ದ ವೈದ್ಯ; ವೈಟ್‌ ಕಾಲರ್ ಭಯೋತ್ಪಾದನೆಯ ಶಂಕೆRed Fort Blast: ಕಾರು ಚಾಲನೆ ಮಾಡಿದ್ದ ಶಂಕಿತ ವ್ಯಕ್ತಿಯ ಸಿಸಿಟಿವಿ ದೃಶ್ಯ ಸೆರೆ
Dailyhunt
Disclaimer: This content has not been generated, created or edited by Dailyhunt. Publisher: Prajavani