ವಿಶ್ವಸಂಸ್ಥೆ: ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೃತೃತ್ವದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ವಿಶ್ವಸಂಸ್ಥೆ ಪ್ರತಿಕ್ರಿಯೆ ನೀಡಿದೆ. 'ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬಯಸುವ ಯುವಕರಿಗೆ ಕಿರುಕುಳ ನೀಡದೆ, ಬಂಧನ ಅಥವಾ ಹಿಂಸಾಚರದ ಭಯವಿಲ್ಲದೆ ಹೋರಾಟ ನಡೆಸಲು ಅವಕಾಶ ನೀಡಬೇಕು' ಎಂದು ಕರೆ ನೀಡಿದೆ.
ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಯಂಟನಿಯೊ ಗುಟೆರಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಅವರು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
'ದೆಹಲಿ ಪ್ರತಿಭಟನೆಗಳ ಬಗ್ಗೆ ತಿಳಿದಿದೆ. ಎಲ್ಲಡೆ ಇರುವಂತೆ ಹಕ್ಕುಗಳ ರಕ್ಷಣೆಯನ್ನು ಭದ್ರತಾ ಪಡೆಗಳು ಖಾತ್ರಿಪಡಿಸಬೇಕು' ಎಂದು ಗುಟೆರಸ್ ಒತ್ತಾಯಿಸಿದ್ದಾರೆ.
ಪ್ರತಿಭಟನೆ ಅಂತ್ಯ
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಪ್ರತಿಭಟನೆ ಆರಂಭಿಸಿದ್ದ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ), ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿದೆ. ಹಾಗಾಗಿ ಹೋರಾಟವನ್ನು ಕೈಬಿಡುತ್ತಿದ್ದೇವೆ ಎಂದು ತಿಳಿಸಿದೆ.
ಜುಲೈ 20ರಂದು ನಡೆದ 'ಸಂಸತ್ ಚಲೊ' ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಂದು ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಅಶ್ರುವಾಯು ಶೆಲ್‌ಗಳನ್ನೂ ಪ್ರಯೋಗಿಸಿದ್ದರು. ನೂರಾರು ವಿದ್ಯಾರ್ಥಿಗಳು ಗಾಯಗೊಂಡು, 80ಕ್ಕೂ ಹೆಚ್ಚು ಪೊಲೀಸರು ಪೆಟ್ಟಾಗಿದೆ ಎಂದು ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಹೇಳಿಕೆ ನೀಡಿತ್ತು. ಆದರೀಗ, ಪ್ರತಿಭಟನೆ ಅಂತ್ಯಗೊಂಡಿದೆ.

