ನವದೆಹಲಿ: ಕೆಂಪು ಕೋಟೆಯ ಬಳಿ ಸೋಮವಾರ ನಡೆದ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Delhi Blasts | ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ: ಅಮೆರಿಕಸೋಮವಾರ ಸಂಜೆ ಕೆಂಪು ಕೋಟೆಯ ಬಳಿಯ ಮೆಟ್ರೊ ನಿಲ್ದಾಣದ ಸಮೀಪದ ಸಿಗ್ನಲ್‌ನಲ್ಲಿ ನಿಧಾನವಾಗಿ ಸಂಚರಿಸುತ್ತಿದ್ದ ಕಾರು ಸ್ಪೋಟಗೊಂಡಿತ್ತು.
ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆ ಅಡಿಯಲ್ಲಿ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಪ್ರದೇಶಗಳಲ್ಲಿ ಸಂಚಾರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸ್ಪೋಟದ ನಂತರ ನಗರದ ಹಲವು ಕಡೆಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
Red Fort Blast: ಯುಎಪಿಎ, ಸ್ಫೋಟಕ ಕಾಯ್ದೆಯಡಿ ಎಫ್‌ಐಆರ್ ದಾಖಲುDelhi Red Fort blast: ಲಾಲ್ ಕಿಲಾ ಮೆಟ್ರೊ ನಿಲ್ದಾಣ ಬಂದ್, ಸಂಚಾರ ನಿರ್ಬಂಧ
