Dailyhunt Logo
  • Light mode
    Follow system
    Dark mode
    • Play Story
    • App Story
ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯ, ಸರ್ವಾಧಿಕಾರಿ ಸರ್ಕಾರ: ಪ್ರಿಯಾಂಕಾ ಗಾಂಧಿ

ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯ, ಸರ್ವಾಧಿಕಾರಿ ಸರ್ಕಾರ: ಪ್ರಿಯಾಂಕಾ ಗಾಂಧಿ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾಕಾರರ ವಿರುದ್ಧ ದೆಹಲಿ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, 'ಭಾರತವು ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಾಳತ್ವದಲ್ಲಿ 'ಸರ್ವಾಧಿಕಾರ' ನಡೆಯುತ್ತಿದೆ' ಎಂದು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

'ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಅವರೊಂದಿಗೆ ಕೈಜೋಡಿಸಿರುವ ಪ್ರತಿಯೊಬ್ಬರೂ ದೇಶದ್ರೋಹದ ಅಪರಾಧ ಎಸಗುತ್ತಿದ್ದಾರೆ' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

'ಮೊದಲು 254 ಸಂಸದರನ್ನು ಬಲವಂತವಾಗಿ ಎಳೆದಾಡಿ, ಕಾನೂನುಬಾಹಿರವಾಗಿ ವಶಕ್ಕೆ ಪಡೆಯುವ ಮೂಲಕ ಅವರ ಮೂಲಭೂತ ಸಾಂವಿಧಾನಿಕ ಹಕ್ಕುಗಳನ್ನು ಹತ್ತಿಕ್ಕಲಾಯಿತು. ಇದೀಗ ವಿರೋಧ ಪಕ್ಷಗಳ ಇತರ ಪ್ರತಿಭಟನಾಕಾರರ ಮೇಲೂ ಅದೇ ದೌರ್ಜನ್ಯ ಎಸಗುತ್ತಿದ್ದಾರೆ' ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಅದಾದ ಬಳಿಕ ರಾಷ್ಟ್ರ ರಾಜಧಾನಿಯ ಎಲ್ಲಾ ಕಡೆ ಬ್ಯಾರಿಕೇಡ್‌ಗಳನ್ನು ಹಾಕಿ ಮುಚ್ಚಿದ್ದಾರೆ. ರೈಲು ಹಾಗೂ ಮೆಟ್ರೊ ಸಂಚಾರ ತಡೆದು, ಇಂಟರ್‌ನೆಟ್‌ ಕಡಿತಗೊಳಿಸಿ ಅಲ್ಲಲ್ಲಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ತಮ್ಮ ಸಾಂವಿಧಾನಿಕ ಪ್ರತಿಭಟನಾ ಹಕ್ಕನ್ನು ಚಲಾಯಿಸುತ್ತಿರುವ ಯುವಕ-ಯುವತಿಯರ ಮೇಲೆ ಹಲ್ಲೆ ನಡೆಸಿ ವಶಕ್ಕೆ ಪಡೆಯುತ್ತಿದ್ದಾರೆ' ಎಂದು ದೂರಿದ್ದಾರೆ.

'ಚುನಾವಣಾ ಆಯೋಗದ ನೆರವಿನೊಂದಿಗೆ ಚುನಾವಣೆಯಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿರುವುದು ಎಲ್ಲರಿಗೂ ತಿಳಿದ ವಿಷಯ. ಈಗ ಸಾರ್ವಜನಿಕವಾಗಿ ಉತ್ತರಿಸಬೇಕಾಗುತ್ತದೆ ಎಂಬ ಭೀತಿಯಿಂದ ಸರ್ಕಾರ ನಡುಗುತ್ತಿದೆ. ಇದಕ್ಕಿಂತ ಬೇರೆ ಸಾಕ್ಷಿ ಬೇಕೇ?' ಎಂದಿದ್ದಾರೆ.

ದೆಹಲಿ ಪೊಲೀಸರ ಭದ್ರಕೋಟೆಗೆ ಲಗ್ಗೆ ಇಟ್ಟ ಸಿಜೆಪಿ ವ್ಯಾಪಕ ಪ್ರತಿಭಟನೆಪ್ರಜಾಪ್ರಭುತ್ವದ ತಾಯಿಯನ್ನು ದಮನಿಸಲು ಯತ್ನ: ಮಲ್ಲಿಕಾರ್ಜುನ ಖರ್ಗೆ
Dailyhunt
Disclaimer: This content has not been generated, created or edited by Dailyhunt. Publisher: Prajavani