ಹಾವೇರಿ: ದೀಪಾವಳಿ ಹಬ್ಬದ ಪ್ರಯುಕ್ತ ಜನರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (ವಾಕರಸಾಸಂ) 340 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗದಿಂದ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.
ನ. 9 ಹಾಗೂ 10ರಂದು ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣ, ವಿಜಯ ನಗರ, ಮಲ್ಲೇಶ್ವರ, ಶಾರದಾ ಕಾಲೊನಿ, ಯಶವಂತಪುರ ಹಾಗೂ ಬಸವೇಶ್ವರ ನಗರದ ನಿಲ್ದಾಣಗಳಿಂದ ಸಂಸ್ಥೆಯ ವ್ಯಾಪ್ತಿಯ ಸ್ಥಳಗಳಿಗೆ ಬಸ್‌ಗಳು ಹೊರಡಲಿವೆ. ನ. 6ರಿಂದ ನ. 8ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಬಸ್‌ಗಳಿವೆ ಎಂದು ಪ್ರಕಟಣೆ ತಿಳಿಸಿದೆ.
261104-22-1260841788

