Dailyhunt Logo
  • Light mode
    Follow system
    Dark mode
    • Play Story
    • App Story
ಡಿಸೆಂಬರ್ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಕಾಲಾವಕಾಶ

ಡಿಸೆಂಬರ್ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಕಾಲಾವಕಾಶ

ನವದೆಹಲಿ: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳಿಗೆ ಡಿಸೆಂಬರ್ ಅಂತ್ಯದ ಒಳಗೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡಿದೆ.

ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಡಿಸೆಂಬರ್ 31ರವರೆಗೆ ಸಮಯ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ಎಸ್‌ಐಆರ್ ಕಾರಣಕ್ಕೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಮನವಿಯ ಮೇರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಡಿಸೆಂಬರ್‌ನಲ್ಲಿ ಮತ್ತೆ ಹೊಸ ಕಾರಣ ಹಿಡಿದುಕೊಂಡು ಬರಬೇಡಿ ಎಂದು ಸೂರ್ಯಕಾಂತ್ ಹೇಳಿದ್ದಾರೆ.

ಜನವರಿ ವೇಳೆಗೆ ಚುನಾವಣೆ ನಡೆಸಿರುವ ಮಾಹಿತಿ ಸಲ್ಲಿಸುತ್ತೇವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಎಸ್‌ಐಆರ್ ನಡೆಯುತ್ತಿದೆ, ಸಮಯ ನೀಡಿ ಎಂದು ರಾಜ್ಯದ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani