ದೊಡ್ಡಬಳ್ಳಾಪುರ:ಚೈತನ್ಯ ನಗರದ ದತ್ತಾತ್ರೇಯ ಬಡಾವಣೆ ಸಮೀಪ ಗುರುವಾರ ನಿರ್ಮಾಣ ಹಂತದ ನೂತನ ಬಡಾವಣೆಯಲ್ಲಿ ದಿನಸಿ ಅಂಗಡಿ ಸಾಮಗ್ರಿ ದಾಸ್ತಾನು ಮಾಡಲು ಶೆಡ್ ನಿರ್ಮಿಸುವಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ದಿನಸಿ ಅಂಗಡಿ ಮಾಲೀಕ ಸತೀಶ್ (35) ಮೃತರು.
ನಗರದ ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆ ಸಮೀಪ ನಿರ್ಮಾಣವಾಗುತ್ತಿರುವ ಬಡಾವಣೆಯಲ್ಲಿ ಅವಘಡ ಸಂಭವಿಸಿದೆ. ಸತೀಶ್ ಬಡಾವಣೆ ಸಮೀಪಕ್ಕೆ ತೆರಳಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-15-727631607

