Dailyhunt Logo
  • Light mode
    Follow system
    Dark mode
    • Play Story
    • App Story
ಈರೇನಹಳ್ಳಿ: ಪರಿಸರ ಜಾಗೃತಿ, ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ಈರೇನಹಳ್ಳಿ: ಪರಿಸರ ಜಾಗೃತಿ, ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ಚಿಕ್ಕಬಳ್ಳಾಪುರ: ಜುಲೈ1ರಿಂದ 7ರವರೆಗೆ ನಡೆಯುತ್ತಿರುವ ಪರಿಸರ ಜಾಗೃತಿ ಅಭಿಯಾನದ ಅಂಗವಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಕುಪ್ಪಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈರೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಈಚೆಗೆ ಆಚರಿಸಲಾಯಿತು.

ಸಮಾನ ಮನಸ್ಕರ ಪ್ರಕೃತಿ ಸಂರಕ್ಷಣಾ ವೇದಿಕೆ ಹಾಗೂ ಬೆಂಗಳೂರು ಅಡ್ವಾಂಟೆಕ್ ಮೈಕ್ರೋಸಾಫ್ಟ್ ಕಂಪನಿಯ ಸಹಯೋಗದಲ್ಲಿ ಶಾಲಾ ಆವರಣದಲ್ಲಿ ವಿವಿಧ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ನಿಧಿಯಿಂದ ಈರೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗಾಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡಿಜಿಟಲ್ ಶಿಕ್ಷಣದ ಉತ್ತೇಜನಕ್ಕಾಗಿ ಕಂಪ್ಯೂಟರ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಅಡ್ವಾಂಟೆಕ್ ಮೈಕ್ರೋಸಾಫ್ಟ್ ನಿರ್ದೇಶಕ ಗಿರೀಶ್ ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ಶಿಕ್ಷಣಕ್ಕೆ ಸಮಾನ ಆದ್ಯತೆ ನೀಡುವುದು ಸಮಾಜಸೇವೆಯ ಪ್ರಮುಖ ಭಾಗವಾಗಿದ್ದು, ಸಂಸ್ಥೆ ಪ್ರತಿವರ್ಷ ಗಿಡ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ಸಮಾನ ಮನಸ್ಕರ ಪ್ರಕೃತಿ ಸಂರಕ್ಷಣಾ ವೇದಿಕೆ ಸದಸ್ಯ ಮರದ ಆನಂದ್ ಮಾತನಾಡಿ, ದೇಶದಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಿಸುವ ಅಗತ್ಯವಿದ್ದು, ವಿಶೇಷ ದಿನಗಳಲ್ಲಿ ಉಡುಗೊರೆಯ ಬದಲಾಗಿ ಗಿಡಗಳನ್ನು ನೀಡುವ ಸಂಸ್ಕೃತಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ಪರಿಸರ ಸ್ನೇಹಿ ಚಟುವಟಿಕೆಗಳು ಹಾಗೂ ಶಾಲಾ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಈರೇನಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಾವತಿ ಅವರನ್ನು ಸನ್ಮಾನಿಸಲಾಯಿತು.

ಸಮಾಜಸೇವಕ ಹೋಟೆಲ್ ರಾಮಣ್ಣ, ಹೆನ್ರಿ ಪ್ರಸನ್ನ, ನಿರ್ದೇಶಕ ರಾಕೇಶ್, ಎಚ್‌ಆರ್ ಮುಖ್ಯಸ್ಥ ಡ್ಯಾನಿಯಲ್, ಅಂಗಾಟ ಶಾಲೆಯ ಮುಖ್ಯ ಶಿಕ್ಷಕಿ ಲಲಿತಮ್ಮ, ಕೆನರಾ ಬ್ಯಾಂಕ್ ಎಫ್‌ಎಲ್‌ಸಿ ವ್ಯವಸ್ಥಾಪಕಿ ಎ.ಎಂ. ಕವಿತ, ಶಿಕ್ಷಕ ವಾಸುದೇವ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260706-16-297739314

Dailyhunt
Disclaimer: This content has not been generated, created or edited by Dailyhunt. Publisher: Prajavani