Dailyhunt Logo
  • Light mode
    Follow system
    Dark mode
    • Play Story
    • App Story
ಎಲ್ಲರ ಚಿತ್ತ 2026 ಬಜೆಟ್‌ ನತ್ತ: ಸಚಿವೆ ನಿರ್ಮಲಾ ಸೀತಾರಾಮನ್ ಚಿತ್ರಗಳು ಇಲ್ಲಿವೆ

ಎಲ್ಲರ ಚಿತ್ತ 2026 ಬಜೆಟ್‌ ನತ್ತ: ಸಚಿವೆ ನಿರ್ಮಲಾ ಸೀತಾರಾಮನ್ ಚಿತ್ರಗಳು ಇಲ್ಲಿವೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಹುನಿರೀಕ್ಷಿತ 2026 ಬಜೆಟ್ ಮಂಡನೆ ಮಂಡಿಸುತ್ತಿದ್ದಾರೆ.

ಸತತವಾಗಿ 9ನೇ ಬಾರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ವಿಶೇಷ ಏನೆಂದರೆ ಈ ಬಾರಿ ತಮಿಳುನಾಡಿನ ಕಾಂಚೀವರಂ ಸೀರೆಯುಟ್ಟು ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ಮಂಡಿಸುತ್ತಿದ್ದಾರೆ.

ಕಾಂಚೀವರಂ ಸೀರೆ ತೊಡುವ ಮೂಲಕ ತಮ್ಮ ತವರು ರಾಜ್ಯವಾದ ತಮಿಳುನಾಡಿನ ಪ್ರಾಚೀನ ಸಾಂಸ್ಕೃತಿಕ ಪರಂಪರೆಗೆ ಗೌರವ ಸೂಚಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಕ್ಕೂ ಮುನ್ನ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಚಿವಾಲಯದ ಹೊರಗಡೆ ಅಧಿಕಾರಿಗಳೊಂದಿಗೆ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಸಂಪ್ರದಾಯದಂತೆ ಸಂಸತ್ತಿಗೆ ತೆರಳುವ ಮುನ್ನ ನಿರ್ಮಲಾ ಸೀತಾರಾಮನ್‌ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮೊಸರು-ಸಕ್ಕರೆ ತಿನಿಸಿ ಶುಭ ಕೋರಿದ್ದಾರೆ.

ಕೈಯಲ್ಲಿ ರಾಷ್ಟ್ರೀಯ ಲಾಂಛನವಿರುವ ಟ್ಯಾಬ್ಲೈಟ್ ಹಿಡಿದು, ಮುಖದಲ್ಲಿ ಭರವಸೆಯ ನಗುವನ್ನು ಇಟ್ಟುಕೊಂಡು ಫೋಟೊಗೆ ಪೋಸ್ ಕೊಟ್ಟಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani