Dailyhunt Logo
  • Light mode
    Follow system
    Dark mode
    • Play Story
    • App Story
ಫಿಫಾ ವಿಶ್ವಕಪ್; ಬೆಂಗಳೂರು ಹೋಟೆಲ್‌ಗಳಲ್ಲಿ ನಸುಕಿನ 3.30ರವರೆಗೆ ಸಿಗಲಿದೆ ಆಹಾರ

ಫಿಫಾ ವಿಶ್ವಕಪ್; ಬೆಂಗಳೂರು ಹೋಟೆಲ್‌ಗಳಲ್ಲಿ ನಸುಕಿನ 3.30ರವರೆಗೆ ಸಿಗಲಿದೆ ಆಹಾರ

ಬೆಂಗಳೂರು: ನಗರದ ಫುಟ್‌ಬಾಲ್ ಪ್ರೇಮಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.

ಫಿಫಾ ವಿಶ್ವಕಪ್ ಪಂದ್ಯಾವಳಿ ಮಹತ್ವದ ಘಟ್ಟ ತಲುಪಿದ್ದು, ಪಂದ್ಯಗಳು ಭಾರತೀಯ ಕಾಲಮಾನ ಮಧ್ಯರಾತ್ರಿ 12.30ಕ್ಕೆ ಆರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರದಲ್ಲಿ ಮಧ್ಯರಾತ್ರಿ 3.30ರವರೆಗೆ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವೆಗೆ ಅವಕಾಶ ಕಲ್ಪಿಸಿದ್ದಾರೆ.

ಸದ್ಯ, ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ರೆಸ್ಟೋರೆಂಟ್‌ಗಳಲ್ಲಿ ಆಹಾರ ಒದಗಿಸಲು ಅವಕಾಶವಿದೆ.

ಜು 14), ಜು.15) ಸೆಮಿಫೈನಲ್‌ ಪಂದ್ಯಗಳು ನಡೆಯಲಿದ್ದು, 19ಕ್ಕೆ ಫೈನಲ್ ಪಂದ್ಯ ನಡೆಯಲಿದೆ. ಈ ಮೂರೂ ದಿನಗಳಿಗೆ ಮಾತ್ರ ವಿಶೇಷ ಅವಕಾಶ ಕಲ್ಪಿಸಿದೆ. ಈ ಮಾಹಿತಿಯನ್ನು ಸ್ವತಃ ಸಿಎಂ ಡಿ.ಕೆ. ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ ಹಿನ್ನೆಲೆಯಲ್ಲಿ ವಿಶ್ವಕಪ್ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿರುವ ಜು. 14, 15 ಹಾಗೂ 19ರಂದು ಈ ಆದೇಶ ಅನ್ವಯವಾಗುವಂತೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ತಡರಾತ್ರಿ ಪಂದ್ಯ ಪ್ರದರ್ಶನಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದ್ದಾರೆ.

ಸಾರ್ವಜನಿಕ ಸುರಕ್ಷತೆ, ಕಾನೂನು ಸುವ್ಯವಸ್ಥೆಯನ್ನು ನಮ್ಮ ಅತ್ಯುನ್ನತ ಆದ್ಯತೆಯಾಗಿ ಇಟ್ಟುಕೊಂಡೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಂದ್ಯ ವೀಕ್ಷಣೆ ವೇಳೆ ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಫಿಫಾ ವಿಶ್ವಕಪ್ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸ್ಪೇನ್ ಮತ್ತು ಫ್ರಾನ್ಸ್ ತಂಡಗಳು ಸೆಣಸಲಿವೆ. 15ರಂದು ನಡೆಯಲಿರುವ 2ನೇ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಈ ಎರಡೂ ಪಂದ್ಯಗಳಲ್ಲಿ ಗೆದ್ದ ತಂಡಗಳು ಇದೇ 19ರಂದು ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಟ್ರೋಫಿಗಾಗಿ ಕಾದಾಡಲಿವೆ.

ಫಿಫಾ ವಿಶ್ವಕಪ್| ಆಡುವ ತಂಡಗಳ ಸಂಖ್ಯೆ ವಿಸ್ತರಣೆ ಬಗ್ಗೆ ನಂತರ ಚರ್ಚೆ: ಇನ್ಫಾಂಟಿನೊಫಿಫಾ ವಿಶ್ವಕಪ್ ಮೊದಲ ಸೆಮಿಫೈನಲ್‌: ಫ್ರಾನ್ಸ್‌- ಸ್ಪೇನ್ ಮುಖಾಮುಖಿ ಇಂದು
Dailyhunt
Disclaimer: This content has not been generated, created or edited by Dailyhunt. Publisher: Prajavani