ರೋಮ್: ಜಿ7 ಶೃಂಗಸಭೆಯ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರು 'ನನ್ನೊಂದಿಗೆ ಫೋಟೊ ತೆಗೆಸಿಕೊಳ್ಳಲು ಬೇಡಿಕೊಂಡಿದ್ದರು' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ.
ಟ್ರಂಪ್ ಅವರ ಹೇಳಿಕೆಯು ವಿದಾದಕ್ಕೆ ಕಾರಣವಾಗಿದೆ. ಈ ನಡುವೆ ಟ್ರಂಪ್‌ಗೆ ಮೆಲೊನಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
'ಟ್ರಂಪ್ ಅವರು ಒಂದನ್ನು ನೆನಪಿಟ್ಟುಕೊಳ್ಳಬೇಕು. ಇಟಲಿ ಅಥವಾ ನಾನು ಯಾವುದೇ ಕಾರಣಕ್ಕೂ ಬೇಡಿಕೊಳ್ಳುವುದಿಲ್ಲ' ಎಂದು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ನನ್ನೊಂದಿಗೆ ಫೋಟೊ ತೆಗೆಸಿಕೊಳ್ಳಿ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರು ನನ್ನನ್ನು ಬೇಡಿಕೊಂಡರು' ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.
ಈ ವಿವಾದದ ನಡುವೆ ಮುಂದಿನ ವಾರ ಅಮೆರಿಕ ಪ್ರವಾಸ ಕೈಗೊಳ್ಳಬೇಕಿದ್ದ ಇಟಲಿ ವಿದೇಶಾಂಗ ಸಚಿವರು ತಮ್ಮ ಪ್ರವಾಸವನ್ನು ರದ್ದು ಮಾಡಿದ್ದಾರೆ.
ಪಶ್ಚಿಮ ಏಷ್ಯಾ ಯುದ್ಧಕ್ಕೆ ತೆರೆ: ಶಾಂತಿ ಒಪ್ಪಂದಕ್ಕೆ ಟ್ರಂಪ್, ಪೆಜೆಶ್ಕಿಯಾನ್ ಸಹಿG7 Summit: ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ದಿಟ್ಟಿಸಿ ನೋಡಿದ ಮೆಲೊನಿ!

