Dailyhunt Logo
  • Light mode
    Follow system
    Dark mode
    • Play Story
    • App Story
ಗದಗದಲ್ಲಿ ನವೆಂಬರ್ 6ರಂದು ಯುವ ಸಂಸತ್‌ ಸಭೆ ಆಯೋಜನೆ

ಗದಗದಲ್ಲಿ ನವೆಂಬರ್ 6ರಂದು ಯುವ ಸಂಸತ್‌ ಸಭೆ ಆಯೋಜನೆ

ಗದಗ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್‌ ಸಭೆಯನ್ನು ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಉದ್ಘಾಟಿಸುವರು.

ಶಾಸಕ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

261104-23-339756112

Dailyhunt
Disclaimer: This content has not been generated, created or edited by Dailyhunt. Publisher: Prajavani