ಬೆಳಗಾವಿ: 'ಗೃಹಲಕ್ಷ್ಮಿ ಯೋಜನೆ ಮಾರ್ಚ್ ತಿಂಗಳ ಕಂತಿನ ಹಣ ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ತಾಲ್ಲೂಕಿನ ಬಾಕನೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಇದೇ ಯೋಜನೆಯ ಏಪ್ರಿಲ್ ಕಂತಿನ ಹಣವೂ ಎಂಟರಿಂದ 10 ದಿನಗಳಲ್ಲಿ ಫಲಾನುಭವಿಗಳ ಕೈಸೇರಲಿದೆ' ಎಂದರು.

