Dailyhunt Logo
  • Light mode
    Follow system
    Dark mode
    • Play Story
    • App Story
ಗುಬ್ಬಿಯ ಸಿ.ಎಸ್.ಪುರದಲ್ಲಿ ದೇವೇಗೌಡರ ಪುತ್ಥಳಿ ಲೋಕಾರ್ಪಣೆ ನ.13ಕ್ಕೆ

ಗುಬ್ಬಿಯ ಸಿ.ಎಸ್.ಪುರದಲ್ಲಿ ದೇವೇಗೌಡರ ಪುತ್ಥಳಿ ಲೋಕಾರ್ಪಣೆ ನ.13ಕ್ಕೆ

ಗುಬ್ಬಿ: ತಾಲ್ಲೂಕಿನ ಸಿ.ಎಸ್. ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ತಿಳಿಸಿದರು.

ಪಟ್ಟಣದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, 'ದೇವೆಗೌಡರ ಸುಧೀರ್ಘ ರಾಜಕೀಯ ಬದುಕಿನ ಚಿತ್ರಣಗಳನ್ನು ಚಿರಾಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಪುತ್ಥಳಿ ಲೋಕಾರ್ಪಣೆಗೊಳಿಸಲಾಗುತ್ತಿದೆ' ಎಂದರು.

ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಪಾಲ್ಗೊಳ್ಳಲಿದ್ದಾರೆ.

ತಹಶೀಲ್ದಾರ್ ಆರತಿ ಬಿ., ಅಧಿಕಾರಿಗಳು, ಮುಖಂಡರಾದ ಕುಮಾರ್, ನರಸೇಗೌಡ, ಬಸವರಾಜು, ಜೆಡಿಎಸ್‌ ಸಿ.ಎಸ್. ಪುರ ಹೋಬಳಿ ಘಟಕದ ಅಧ್ಯಕ್ಷ ಜಗದೀಶ್, ರಾಮು ಹಾಜರಿದ್ದರು.

261104-17-1750459201

Dailyhunt
Disclaimer: This content has not been generated, created or edited by Dailyhunt. Publisher: Prajavani