ಗುಂಡ್ಲುಪೇಟೆ: ಸಮರ್ಪಕ ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಅ.3ರಂದು ಮಾದರಿ ಗುಂಡ್ಲುಪೇಟೆ ಅಭಿಯಾನದ ರೂವಾರಿ ಡಾ. ಬಿ.ಎಸ್.ಅಜಯ್ ಕುಮಾರ್ ನೇತೃತ್ವದಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವುದು ಹಾಗೂ ಬಸ್ ಸಂಪರ್ಕವಿಲ್ಲದ ಗ್ರಾಮಗಳಿಗೆ ಸಾರಿಗೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಗುತ್ತದೆ.
ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು, ಮಹಿಳೆಯರು, ನೌಕರರು, ಕೂಲಿ ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗಳ ಕುರಿತು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವುದು ಜಾಥಾದ ಉದ್ದೇಶವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಜಾಥಾ ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
260928-37-765347442

