Dailyhunt Logo
  • Light mode
    Follow system
    Dark mode
    • Play Story
    • App Story
ಗುಂಡ್ಲುಪೇಟೆ ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷತೆ ಇಲ್ಲದೆ ಕೆಲಸ ಸರಿಯಲ್ಲ

ಗುಂಡ್ಲುಪೇಟೆ ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷತೆ ಇಲ್ಲದೆ ಕೆಲಸ ಸರಿಯಲ್ಲ

ಗುಂಡ್ಲುಪೇಟೆ: ಸ್ವಚ್ಛತಾ ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಚರಂಡಿ ಸ್ವಚ್ಛತೆಗೆ ನಿಯೋಜಿಸಿದ ಘಟನೆ ತಾಲ್ಲೂಕಿನ ದೊಡ್ಡತುಪ್ಪೂರುದಲ್ಲಿ ನಡೆದಿದ್ದು, ಅಧಿಕಾರಿಗಳ ನಡೆಗೆ ರೈತ ಮುಖಂಡ ಶಶಿಕುಮಾರ್ ಎಂ. ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನ ಶಿಂಡನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯದೊಡ್ಡತುಪ್ಪೂರುದಲ್ಲಿ ಚರಂಡಿ ಸ್ವಚ್ಛತಾ ಕಾರ್ಯದ ವೇಳೆ ಕಾರ್ಮಿಕರು ಕೈಗವಸು, ಶೂ, ಮಾಸ್ಕ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳಿಲ್ಲದೆ ಬರಿಗೈಯಲ್ಲೇ ಕೆಲಸ ನಿರ್ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

'ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸುವುದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಚರಂಡಿ ಸ್ವಚ್ಛತೆ ವೇಳೆ ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಧನ ಒದಗಿಸಬೇಕು. ಆದರೆ ಕನಿಷ್ಠ ಸುರಕ್ಷತಾ ಕ್ರಮ ಪಾಲಿಸದೆ ಕಾರ್ಮಿಕರಿಂದ ಕೆಲಸ ಮಾಡಿಸಲಾಗುತ್ತಿದೆ' ಎಂದು ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-37-165946864

Dailyhunt
Disclaimer: This content has not been generated, created or edited by Dailyhunt. Publisher: Prajavani