Dailyhunt Logo
  • Light mode
    Follow system
    Dark mode
    • Play Story
    • App Story
ಹಾಸನ: ಎಚ್‌ಕೆಎಸ್ ಕಾಲೇಜಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ

ಹಾಸನ: ಎಚ್‌ಕೆಎಸ್ ಕಾಲೇಜಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ

ಹಾಸನ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದಲ್ಲಿ ನಡೆಯುತ್ತಿರುವ ನಗರದ ಎಚ್.ಕೆ.ಎಸ್. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಹಾಸನ ತಾಲ್ಲೂಕು ಪದವಿಪೂರ್ವ ಕಾಲೇಜುಗಳ ಎ-ವಿಭಾಗದಲ್ಲಿ ಕ್ರೀಡಾಕೂಟದಲ್ಲಿ ಬಾಲಕರು ಮತ್ತು ಬಾಲಕಿಯರ ವಿಭಾಗದ ಓಟದ ಸ್ಪರ್ಧೆ, ಡಿಸ್ಕಸ್ ಥ್ರೋ, ಗುಂಡು ಎಸೆತ, ಶಟಲ್ ಬ್ಯಾಡ್ಮಿಂಟನ್, ಎತ್ತರ ಜಿಗಿತ, ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಅತ್ಯುತ್ತಮ ನಿರ್ವಹಣೆ ತೋರಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ ಪಡೆದಿದ್ದು, ಕಾಲೇಜು ಸಮಗ್ರ ಪ್ರಶಸ್ತಿ ಬಾಚಿಕೊಂಡಿದೆ.

ವಿಜೇತರನ್ನು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ವಿಮಲ್ ರಾಜ್ ಜಿ., ಎಚ್‌ಕೆಎಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಚ್.ಕೆ. ಸುರೇಶ್, ಕಾರ್ಯದರ್ಶಿ ಎಚ್.ಎಸ್. ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕ ಮಹೇಶ್ ಕುಮಾರ್ ಸಿ., ಬೋಧಕ ಸಿಬ್ಬಂದಿ ಅಭಿನಂದಿಸಿದ್ದಾರೆ.

260928-36-803347773

Dailyhunt
Disclaimer: This content has not been generated, created or edited by Dailyhunt. Publisher: Prajavani