Dailyhunt Logo
  • Light mode
    Follow system
    Dark mode
    • Play Story
    • App Story
ಹಾವೇರಿ: ನಿವೃತ್ತ ಸರ್ಕಾರಿ ನೌಕರನಿಂದಲೇ ₹3 ಸಾವಿರ ಲಂಚ: ಎಸ್‌ಡಿಎ ಬಂಧನ

ಹಾವೇರಿ: ನಿವೃತ್ತ ಸರ್ಕಾರಿ ನೌಕರನಿಂದಲೇ ₹3 ಸಾವಿರ ಲಂಚ: ಎಸ್‌ಡಿಎ ಬಂಧನ

ಹಾವೇರಿ: ನಿವೃತ್ತ ಸರ್ಕಾರಿ ನೌಕರರಿಗೆ ಗುಂಪು ವಿಮೆ ಮಂಜೂರು ಮಾಡಿಕೊಡಲು ₹ 3 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ದ್ವಿತೀಯ ದರ್ಜೆ ಸಹಾಯಕರಾದ (ಎಸ್‌ಡಿಎ) ಅಕ್ಕಮ್ಮ ಬಿದರೇರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ₹ 3 ಸಾವಿರ ನಗದು ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ಎಫ್‌ಡಿಎ ಆಗಿ ಕೆಲಸ ಮಾಡಿ ನಿವೃತ್ತರಾಗಿದ್ದ ಮಹದೇವ ಹನುಮಂತಪ್ಪ ಜೇಕಿನಕಟ್ಟಿ ಅವರು ಗುಂಪು ವಿಮೆ ಮೊತ್ತದ ಬಿಲ್ ಮಾಡಿಕೊಡಲು ಕೋರಿಕೆ ಸಲ್ಲಿಸಿದ್ದರು. ಬಿಲ್ ಮಂಜೂರು ಮಾಡಲು ಆರೋಪಿ ಅಕ್ಕಮ್ಮ ಅವರು ₹ 3 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು.

ನೊಂದ ಮಹದೇವ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಡಿವೈಎಸ್ಪಿ ಸಿ. ಮಧುಸೂದನ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.

Dailyhunt
Disclaimer: This content has not been generated, created or edited by Dailyhunt. Publisher: Prajavani