ಹನೂರು: ತಾಲ್ಲೂಕಿನ ಕೂಳಿಹಟ್ಟಿ, ಬೆಳ್ಳಾಜಿ ಬೀಟ್ ಪ್ರದೇಶದಲ್ಲಿ ಬೆಳೆದಿದ್ದ 292 ಗಾಂಜಾ ಗಿಡಗಳನ್ನು ಅಬಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು 213 ಕೆ.ಜಿ 600 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ ಹಡಪದ, ಬಿ.ಆರ್.ಟಿ ಡಿ.ಸಿ.ಎಫ್ ಶ್ರೀಪತಿ, ಚಾಮರಾಜನಗರ ಅಬಕಾರಿ ಉಪ ಆಯುಕ್ತ ಚಂದ್ರ ಅವರ ಮಾರ್ಗದರ್ಶನದಲ್ಲಿ ಚಾಮರಾಜನಗರ ಉಪವಿಭಾಗದ ಅಬಕಾರಿ ಡಿವೈಎಸ್‌ಪಿ ಕೆ.ಟಿ.ವಿಜಯ್ ಕುಮಾರ್, ಇನ್‌ಸ್ಪೆಕ್ಟರ್ ಸಿ.ಎಂ. ದಯಾನಂದ, ಉಮಾಶಂಕರ್, ಬೈಲೂರು ವಲಯ ಅರಣ್ಯಾಧಿಕಾರಿ ಡಿ. ದೇವರಾಜು, ಉಪವಲಯ ಅರಣ್ಯಾಧಿಕಾರಿ ಎಸ್.ರಾಜೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಗಾಂಜಾ ಬೆಳೆದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
260928-37-1236373027

