ಹೆಬ್ಬೂರು: ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ಯುವ ಸೌರಭ ಕಾರ್ಯಕ್ರಮ ನಡೆಯಿತು.
ಪ್ರಾಂಶುಪಾಲ ತೇಜಸ್ವಿ, 'ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕಲೆ, ಕ್ರೀಡೆ, ಯೋಗ, ಲಲಿತಕಲೆಗಳಂತಹ ಹವ್ಯಾಸಗಳ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಓದಿನ ಜತೆಗೆ ತಮ್ಮಿಷ್ಟದ ಕಲೆ ಕಲಿಯುವ ಹವ್ಯಾಸ ರೂಢಿಸಿಕೊಂಡಾಗ ಸಮಾಜಕ್ಕೆ ಆಸ್ತಿಯಾಗುತ್ತಾರೆ' ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, 'ಯುವಜನರಿಗೆ ಕಲೆ ಎಂಬುದು ಕೇವಲ ಮನರಂಜನೆಯಲ್ಲ; ಅವರಲ್ಲಿನ ಭಾವನೆಗಳ ಅಭಿವ್ಯಕ್ತಿಯ ಮಾಧ್ಯಮವಾಗಿದೆ. ಕಲೆ ಒಬ್ಬ ವ್ಯಕ್ತಿಯನ್ನು ಸಮಾಜಮುಖಿಯಾಗಿ ಮಾಡುತ್ತದೆ' ಎಂದರು.
ಇನ್‌ಫಾರ್ಮಾಟಿಕ್ಸ್ ಇಂಡಿಯಾ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಎನ್.ವಿ.ಸತ್ಯನಾರಾಯಣ, 'ಕಾಲೇಜಿನ ಬೆಳವಣಿಗೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು' ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಡಿ.ವಿ.ಸುರೇಶ್ ಕುಮಾರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಕುಮಾರ್, ನಿವೃತ್ತ ಪ್ರಾಂಶುಪಾಲೆ ಅಕ್ಕಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರದೀಪ್ ಸೇರಿದಂತೆ ಇತರರು ಇದ್ದರು.
ಸಭಾ ಕಾರ್ಯಕ್ರಮದ ಬಳಿಕ ಕಲಾವಿದರು ಸುಗಮ ಸಂಗೀತ, ಜಾನಪದ ಗೀತೆ, ವೀರಗಾಸೆ, ನೃತ್ಯರೂಪಕ, ನಾಸಿಕ್ ಡೋಲು, ಜಾನಪದ ನೃತ್ಯ ಪ್ರಸ್ತುತಪಡಿಸಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-17-903745633

