ಯಾದಗಿರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮ್ಯಾಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಯೋಜನೆಗಳ ಸೌಲಭ್ಯಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರಲ್ಲದ ಹಿಂದುಳಿದ ವರ್ಗಗಳ (ಪ್ರವರ್ಗ-1 ಸೇರಿ) ವಿದ್ಯಾರ್ಥಿಗಳು ಎಸ್‌ಎಸ್‌ಪಿ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ನ. 30 ಕೊನೆಯ ದಿನವಾಗಿದೆ. ಇಲಾಖೆಯ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಮಾಹಿತಿಗಾಗಿ https://bcwd.karnataka.gov.inಗೆ ಭೇಟಿ ನೀಡಬಹುದು. ಸಹಾಯವಾಣಿ ಮೊ. 8050770004ಗೆ ಸಂಪರ್ಕಿಸಬಹುದು.
261104-30-441675844

