Dailyhunt
ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್‌ನಿಂದ ಸಾವು

ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್‌ನಿಂದ ಸಾವು

ಕಲಬುರ್ಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರ್ಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಅವರು ಗುರುವಾರ ಕೋವಿಡ್‌ನಿಂದ ನಗರದ ‌ಖಾಸಗಿ ಅಸ್ಪತ್ರೆಯಲ್ಲಿ ಮೃತಪಟ್ಟರು.

ವಾರದ ಹಿಂದೆ ಸೋಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ ಇತ್ತೀಚೆಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಜಯತೀರ್ಥ ಅವರ ತಂದೆ ವೆಂಕಟರಾವ್ ಕಾಗಲಕರ್ ಅವರೂ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani