Dailyhunt Logo
  • Light mode
    Follow system
    Dark mode
    • Play Story
    • App Story
ಹೊಸ ಪಡಿತರ ಚೀಟಿ ತಡಮಾಡದೆ ಅರ್ಹರಿಗೆ ವಿತರಿಸಿ - ಮೋಹನ ಪೂಜಾರಿ

ಹೊಸ ಪಡಿತರ ಚೀಟಿ ತಡಮಾಡದೆ ಅರ್ಹರಿಗೆ ವಿತರಿಸಿ - ಮೋಹನ ಪೂಜಾರಿ

ಬೈಂದೂರು: ಅನ್ನಭಾಗ್ಯ ಯೋಜನೆಯಡಿ ವೈದ್ಯಕೀಯ ನೆಲೆಯಲ್ಲಿ ನೀಡುವ ಹೊಸ ಪಡಿತರ ಚೀಟಿಯನ್ನು ಆರ್ಹ ಅರ್ಜಿದಾರರಿಗೆ ತಡ ಮಾಡದೆ ವಿತರಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಆಹಾರ ನಿರೀಕ್ಷಕರಿಗೆ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಖಾತೆಗೂ ಹಣ ಪಾವತಿಯಾಗುತ್ತಿರುವ ಸಾಧ್ಯತೆ ಇದೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕು. ಫಲಾನುಭವಿಗಳು ಮೃತಪಟ್ಟ ವಿಷಯ ತಿಳಿದ ತಕ್ಷಣ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ನೀಡಿ, ಅವರ ಹೆಸರು ಪಟ್ಟಿಯಿಂದ ಕಡಿತಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಮೆಸ್ಕಾಂನಿಂದ ಬಂದಿರುವ ಮೇ ತಿಂಗಳ ಬಿಲ್‌ ರೀಡಿಂಗ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ, ಕೆಲವರಿಗೆ ಹೆಚ್ಚು ಬಿಲ್ ಬಂದಿದೆ. ಬಡವರಿಗೆ ಇದರಿಂದ ಸಮಸ್ಯೆಯಾಗಿದೆ ಎಂದು ಅಧ್ಯಕ್ಷರು ಹೇಳಿದರು. ಉತ್ತರಿಸಿದ ಅಧಿಕಾರಿ, ಮುಂದಿನ ತಿಂಗಳ ಬಿಲ್ ಮೊತ್ತದಲ್ಲಿ ಹೊಂದಾಣಿಕೆ ಆಗುತ್ತದೆ ಎಂದರು. ಮಂಗಳವಾರ ಸಹಿತ ವಾರದ ಬೇರೆ ದಿನಗಳಲ್ಲಿ ವಿದ್ಯುತ್ ನಿಲುಗಡೆ ಮಾಡುವುದಾದರೆ ಮುಂಚಿತವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ತಿಳಿಸಿದರು.

ಗ್ಯಾರಂಟಿ ಯೋಜನೆ ನಿಲ್ಲುವ ಪ್ರಶ್ನೆಯೇ ಇಲ್ಲ. ಗ್ಯಾರಂಟಿ ಯೋಜನೆಯ ಪರಿಷ್ಕರಣೆ ನಡೆಯುತ್ತಿದ್ದು ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಅಧ್ಯಕ್ಷರು ಸೂಚನೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-28-2088405134

Dailyhunt
Disclaimer: This content has not been generated, created or edited by Dailyhunt. Publisher: Prajavani