ಹುಲಸೂರು: ಬಸವಕಲ್ಯಾಣದ ಹುಲಸೂರು ರಸ್ತೆ ಬಳಿ ಸೋಮವಾರ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿ ಹೊರಟಿದ್ದ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಗೌರ್ ತಾಂಡಾ ನಿವಾಸಿ ಪೂನಮ ಪವಾರ್ (50) ಮೃತರು. ಸಂಬಂಧಿ ಅಂಕುಶ ಜತೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಅಡತ್ ಬಜಾರ್ ಬಳಿ ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿ ಹೊಡೆದಿದೆ.
ಗಾಯಗೊಂಡಿರುವ ಅಂಕುಶ ಮತ್ತು ಸೋನಾಲಿ ಎಂಬುವವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಪಿಎಸ್‌ಐ ಸಿದ್ದೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
260917-33-1442774016

