Dailyhunt Logo
  • Light mode
    Follow system
    Dark mode
    • Play Story
    • App Story
ಇಂದು ಕೇಂದ್ರ ಬಜೆಟ್‌: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಇಂದು ಕೇಂದ್ರ ಬಜೆಟ್‌: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಇಂದು ಕೇಂದ್ರ ಬಜೆಟ್‌: ಆರ್ಥಿಕ ಸ್ಥಿರತೆ, ಅಭಿವೃದ್ಧಿ ಸಮನ್ವಯಕ್ಕೆ ಯತ್ನ?

ನವದೆಹಲಿ: ಭೌಗೋಳಿಕ ರಾಜಕೀಯ ಅನಿಶ್ಚಿತತೆ, ಬಂಡವಾಳದ ಹೊರ ಹರಿವು, ಅಮೆರಿಕದ ಸುಂಕ ಹೇರಿಕೆಯಿಂದ ಭಾರತದ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರದಂತೆ ಆರ್ಥಿಕ ಸ್ಥಿರತೆ ಮತ್ತು ಅಭಿವೃದ್ಧಿ ಮಧ್ಯೆ ಸಮನ್ವಯ ಕಾಯ್ದುಕೊಳ್ಳುವ ಉಪಕ್ರಮಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಡೈರಿಯಲ್ಲಿ ರಾಜಕಾರಣಿಗಳು, ನಟ-ನಟಿಯರ ಹೆಸರು

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ. ರಾಯ್ ಅವರು ತಮ್ಮ ಡೈರಿಯಲ್ಲಿ ಕೆಲವು ರಾಜಕಾರಣಿಗಳು, ಸಿನಿಮಾ ಕ್ಷೇತ್ರದ ಗಣ್ಯರು, ಮಾಡೆಲ್‌ಗಳು ಹಾಗೂ ನಟ-ನಟಿಯರ ಹೆಸರುಗಳನ್ನು ಬರೆದಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಅಸಮಾತೋಲನ ನಿವಾರಣೆಗೆ ₹ ₹43,914 ಕೋಟಿ: ಪ್ರೊ.ಎಂ.ಗೋವಿಂದರಾವ್‌ ಸಮಿತಿ ವರದಿ

ಬೆಂಗಳೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಮುಂದಿನ ಐದು ವರ್ಷಗಳಲ್ಲಿ ಹೆಚ್ಚುವರಿಯಾಗಿ ₹43,914 ಕೋಟಿ ವಿನಿಯೋಗಿಸಬೇಕು ಎಂದು ಈ ಕುರಿತು ರಚಿಸಿದ್ದ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಕಡ್ಡಾಯ ಸೇವಾ ಬಾಂಡ್‌ ಅವಧಿ ಮುಂದೂಡಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: 'ಸರ್ಕಾರಿ ಕಡ್ಡಾಯ ಸೇವಾ ಬಾಂಡ್‌ ಅವಧಿಯನ್ನು ಮುಂದೂಡುವ ಮೂಲಕ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸೂಪರ್‌ ಸ್ಪೆಷಾಲಿಟಿ ಕೋರ್ಸ್‌ ತೆಗೆದುಕೊಳ್ಳಲು ಅನುವು ಮಾಡಿಕೊಡುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು' ಎಂದು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಕೇಂದ್ರದಿಂದ ತಾರತಮ್ಯ ಆರೋಪ | ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ: ಸಿದ್ದರಾಮಯ್ಯ

ಬೆಂಗಳೂರು: '16ನೇ ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರವು ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ, ವಿಶೇಷ ಅನುದಾನ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಮಂಡಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ನನ್ನ ಸಾಮಾಜಿಕ ಜಾಲತಾಣದಲ್ಲಿ 'ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ' ಎಂಬ ಅಭಿಯಾನ ಆರಂಭಿಸಿದ್ದೇನೆ. ಈ ಅಭಿಯಾನವನ್ನು ಬೆಂಬಲಿಸಬೇಕು' ಎಂದು ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

5500 ಇ-ಸೈಕಲ್‌ ವಿತರಣೆ: ಆಂಧ್ರ ಸಿ.ಎಂ ಚಂದ್ರಬಾಬು ನಾಯ್ಡು ಗಿನ್ನಿಸ್‌ ದಾಖಲೆ

ಕುಪ್ಪಂ (ಆಂಧ್ರಪ್ರದೇಶ): ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರು ಶನಿವಾರ ಚಿತ್ತೂರು ಜಿಲ್ಲೆಯಲ್ಲಿ 24 ಗಂಟೆ ಅವಧಿಯಲ್ಲಿ ಮಹಿಳೆಯರಿಗೆ 5,500 ಇ-ಸೈಕಲ್‌ಗಳನ್ನು ವಿತರಿಸಿ, ಗಿನ್ನಿಸ್‌ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಕಾಂಗೊದಲ್ಲಿ ಭೂಕುಸಿತ: 200 ಮಂದಿ ಸಾವು

ಗೋಮಾ (ಕಾಂಗೊ): ಕಾಂಗೊದ ಕೊಲ್ಟನ್‌ ಗಣಿಗಾರಿಕೆ ಪ್ರದೇಶದಲ್ಲಿ ಭೂಕಂಪ ಸಂಭವಿಸಿ, ಹಲವು ಗಣಿಗಳು ಕುಸಿದು 200 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಜಯಮಾಲಾ ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷರಾಗಿ ನಟಿ, ನಿರ್ಮಾಪಕಿ ಜಯಮಾಲಾ ಆಯ್ಕೆಯಾಗಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಬೆಳ್ಳಿ ದರ ₹72 ಸಾವಿರ ಇಳಿಕೆ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶನಿವಾರ ನಡೆದ ವಹಿವಾಟಿನಲ್ಲಿ ಬೆಳ್ಳಿ ಧಾರಣೆಯು ಒಂದೇ ದಿನ ಕೆ.ಜಿಗೆ ₹72,500 (ಶೇ 18.85ರಷ್ಟು) ಇಳಿಕೆ ಆಗಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

IND vs NZ | ಇಶಾನ್ ರನ್‌..ರನ್‌.. ಭಾರತ ವಿನ್..

ತಿರುವನಂತಪುರ: ಇಶಾನ್ ಕಿಶನ್ ಶತಕದ ಭರಾಟೆ ಮತ್ತು ಅರ್ಷದೀಪ್ ಸಿಂಗ್ ಅವರ ದಾಳಿಯಿಂದ ಭಾರತ ತಂಡವು ಶನಿವಾರ ನ್ಯೂಜಿಲೆಂಡ್ ಎದುರಿನ ಕೊನೆಯ ಟಿ20 ಪಂದ್ಯದಲ್ಲಿ ಜಯ ಸಾಧಿಸಿತು. ಸರಣಿಯನ್ನು 4-1ರಿಂದ ಗೆದ್ದುಕೊಂಡಿತು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

Dailyhunt
Disclaimer: This content has not been generated, created or edited by Dailyhunt. Publisher: Prajavani