ನ್ಯೂಯಾರ್ಕ್: ವಿಶ್ವಸಂಸ್ಥೆ ಸಾಮಾನ್ಯ ಸಭೆ ಸಂದರ್ಭದಲ್ಲಿ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ರಷ್ಯಾ ಹಾಗೂ ಇರಾನ್‌ನ ವಿದೇಶಾಂಗ ಸಚಿವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಇರಾನ್ ಹಾಗೂ ರಷ್ಯಾದಿಂದ ತೈಲ ಹಾಗೂ ಅನಿಲ ಖರೀದಿ ಮಾಡುವ ರಾಷ್ಟ್ರಗಳ ಮೇಲೆ ನಿರ್ಬಂಧ ವಿಧಿಸುವ ' ಲಿಂಡ್ಸೆ ಒ ಗ್ರಹಾಂ' ಕಾನೂನಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ ಕೆಲವೇ ದಿನಗಳಲ್ಲೇ ಈ ಮಾತುಕತೆ ನಡೆದಿರುವುದು ಗಮನಾರ್ಹ.
ಸೆರ್ಗೆ ಲಾವ್ರೋವ್ ಅವರೊಂದಿಗೆ ಸಚಿವ ಎಸ್. ಜೈಶಂಕರ್ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವ ಸೆರ್ಗೆ ಲಾವ್ರೋವ್ ಅವರೊಂದಿಗೆ ದ್ವಿಪಕ್ಷೀಯ ಬಾಂಧವ್ಯ, ಬ್ರಿಕ್ಸ್ ಸಹಕಾರ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಜೈಶಂಕರ್ ತಿಳಿಸಿದ್ದಾರೆ.

