ಜರುಸಲೇಂ: ಲೆಬನಾನ್‌ನಲ್ಲಿನ ಯಾವುದೇ ಬೆದರಿಕೆಗಳ ವಿರುದ್ಧ ಕ್ರಮ ಜರುಗಿಸುವ ಸ್ವಾತಂತ್ರ್ಯವನ್ನು ಇಸ್ರೇಲ್ ಹೊಂದಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಭಯ ದೇಶಗಳ ನಾಯಕರು ಶನಿವಾರ ರಾತ್ರಿ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಡೊನಾಲ್ಡ್ ಟ್ರಂಪ್ ಅವರು ನೆತನ್ಯಾಹು ಅವರ ಮಾತಿಗೆ ಬೆಂಬಲ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಅಮೆರಿಕವು ಇರಾನ್ ಜೊತೆಗಿನ ಶಾಂತಿ ಒಪ್ಪಂದದ ಕುರಿತು ಇಸ್ರೇಲ್‌ಗೆ ಮಾಹಿತಿ ನೀಡಿದೆ ಎಂದೂ ತಿಳಿಸಿವೆ.
'ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದೆ' ಎಂದು ಟ್ರಂಪ್ 'ಟ್ರುತ್' ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

