Dailyhunt Logo
  • Light mode
    Follow system
    Dark mode
    • Play Story
    • App Story
ಇ-ಸ್ವತ್ತು ನೀಡಲು ವಿಳಂಬ: ವೃದ್ಧೆ ಆರೋಪ

ಇ-ಸ್ವತ್ತು ನೀಡಲು ವಿಳಂಬ: ವೃದ್ಧೆ ಆರೋಪ

ಹುಣಸಗಿ: ತಾಲ್ಲೂಕಿನ ಕೊಡೇಕಲ್ಲ ಗ್ರಾಮದಲ್ಲಿ 24 ವರ್ಷಗಳಿಂದ ತಮ್ಮ ಹೆಸರಿನಲ್ಲಿರುವ ನಿವೇಶನಕ್ಕೆ ಇ-ಸ್ವತ್ತು ನೀಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಇದರಿಂದ ಮನೆ ನಿರ್ಮಾಣ ಕಾರ್ಯಕ್ಕೆ ಕೆಲವರು ಅಡ್ಡಿಪಡಿಸುತ್ತಿದ್ದು, ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ವೃದ್ಧೆ ಸಂಗಮ್ಮ ತಮ್ಮಣ್ಣ ಮುದಗಲ್ಲ ಆರೋಪಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಪತಿ ತಮ್ಮಣ್ಣ ಅವರು 2002ರಲ್ಲಿ ಕೊಡೇಕಲ್ಲ ಗ್ರಾಮದಲ್ಲಿ ನಿವೇಶನ ಖರೀದಿಸಿ, ಸುರಪುರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸಿದ್ದರು. ಪತಿಯ ನಿಧನದ ಬಳಿಕ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದೇನೆ. ಇ-ಸ್ವತ್ತಿಗಾಗಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ, ತೆರಿಗೆ ಪಾವತಿಸಿದ್ದೇನೆ. ಮನೆ ನಿರ್ಮಾಣಕ್ಕೆ ಪರವಾನಗಿಯನ್ನೂ ಪಡೆದಿದ್ದೇನೆ ಎಂದು ತಿಳಿಸಿದರು.

ಮನೆ ನಿರ್ಮಾಣ ಕಾರ್ಯ ಮುಕ್ತಾಯದ ಹಂತದಲ್ಲಿದ್ದು, ಕೆಲವರು ನಿರಂತರವಾಗಿ ಅನಗತ್ಯ ತೊಂದರೆ ನೀಡುತ್ತಿದ್ದಾರೆ. ಬಡವರಾದ ನಮ್ಮ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಅವರು ಮನವಿ ಮಾಡಿದರು.

261104-30-1907383134

Dailyhunt
Disclaimer: This content has not been generated, created or edited by Dailyhunt. Publisher: Prajavani