ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಜುಲೈ 9, 10ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
9ರಂದು ಬೆಳಿಗ್ಗೆ 10.40ಕ್ಕೆ ಸಾಂಬ್ರಾ ವಿಮ ನಿಲ್ದಾಣಕ್ಕೆ ಬಂದಿಳಿಯುವ ಅವರು, 11ಕ್ಕೆ ಸುವರ್ಣ ವಿಧಾನಸೌಧದಲ್ಲಿ ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸುವರು.
ಸಂಜೆ 4ಕ್ಕೆ ಸೌಧದಲ್ಲೇ ಸೌಥ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್ ಪ್ರತಿನಿಧಿಗಳ ಜತೆ ಸಭೆ ಮಾಡುವರು. ಸಂಜೆ 6ಕ್ಕೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸುವರು.
ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿ, 10ರಂದು ಬೆಳಿಗ್ಗೆ 9.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳಸುವರು.

