Dailyhunt Logo
  • Light mode
    Follow system
    Dark mode
    • Play Story
    • App Story
ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಎಸ್‌ಐಆರ್‌: ಜೆಡಿಎಸ್ ಆರೋಪ

ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಎಸ್‌ಐಆರ್‌: ಜೆಡಿಎಸ್ ಆರೋಪ

ಕುಣಿಗಲ್: 'ತಾಲ್ಲೂಕಿನಲ್ಲಿ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡದೆ ಕೇಂದ್ರ ಸ್ಥಾನದಲ್ಲಿ ಕುಳಿತು ಕಾಂಗ್ರೆಸ್ ಮುಖಂಡರ ಮರ್ಜಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ' ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎನ್. ಜಗದೀಶ್ ಆರೋಪಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ತಾಲ್ಲೂಕಿನಲ್ಲಿ ಶಾಸಕರು ಮತ್ತು ಕಾಂಗ್ರೆಸ್ ಮುಖಂಡರು ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಂಡಿದ್ದಾರೆ.

ಚುನಾವಣಾಧಿಕಾರಿಗಳು ಶಾಸಕರ ಸೂಚನೆ ಮೇರೆಗೆ ಬಿಎಲ್‌ಒಗಳನ್ನು ನೇಮಕ ಮಾಡಿಕೊಂಡಿದ್ದಾರೆ. ಕೆಲ ಬಿಎಲ್‌ಒ ಮನೆ ಮನೆಗೆ ತೆರಳಿ ಕಾರ್ಯನಿರ್ವಹಿಸದೆ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಕುಳಿತು ಅರ್ಜಿಗಳನ್ನು ಸಾಮೂಹಿಕವಾಗಿ ಭರ್ತಿ ಮಾಡಿಸುತ್ತಿದ್ದಾರೆ' ಎಂದು ದೂರಿದರು.

ತಾಲ್ಲೂಕಿನಲ್ಲಿ ಆರು ಸಾವಿರ ಬಾಂಗ್ಲಾ ವಲಸಿಗರಿದ್ದು ಮತದಾರರ ಪಟ್ಟಿಯಿಂದ ಕೈಬಿಡಬೇಕು. ರಾಜಕೀಯ ಮುಖಂಡರೊಂದಿಗೆ ಬೆರೆತು ರಾಜಕಾರಣ ಮಾಡುವ ಬಿಎಲ್‌ಒಗಳನ್ನು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿದರು.

ಪಟ್ಟಣದ 19ನೇ ವಾರ್ಡ್, ಗುಜ್ಜಾರಿ ಮೊಹಲ್ಲ ಮತ್ತು ನಿಡಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಎಲ್‌ಒ ಕಾಂಗ್ರೆಸ್ ಮುಖಂಡರ ಮರ್ಜಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಖಂಡಿಸಿದ ಜೆಡಿಎಸ್ ಕಾರ್ಯಕರ್ತರೊಂದಿಗೆ ವಾಗ್ವಾದ ನಡೆಸಿದ್ದಾರೆ. ಚುನಾವಣಾಧಿಕಾರಿಗಳು ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ತೊಡಗಬೇಕು. ನಿಯಮಗಳನ್ನು ಉಲಂಘಿಸುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಮುಖಂಡರಾದ ಕೆ.ಎಲ್.ಹರೀಶ್, ತರಿಕೆರೆ ಪ್ರಕಾಶ್, ರಂಗಸ್ವಾಮಿ, ವಾಸು, ದೀಪೂ, ಕಲ್ಲೆಗೌಡನಪಾಳ್ಯ ಜಗದೀಶ್, ಈ. ಮಂಜು, ಮಂಜಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-17-37011357

Dailyhunt
Disclaimer: This content has not been generated, created or edited by Dailyhunt. Publisher: Prajavani