Dailyhunt Logo
  • Light mode
    Follow system
    Dark mode
    • Play Story
    • App Story
ಕಬ್ಬಿಗೆ ಲಾಭದಾಯಕ ಬೆಲೆ ನೀಡುವಂತೆ ಆಗ್ರಹ: ರೈತರಿಂದ ರಾಣಿ ಚನ್ನಮ್ಮ ವೃತ್ತ ಬಂದ್

ಕಬ್ಬಿಗೆ ಲಾಭದಾಯಕ ಬೆಲೆ ನೀಡುವಂತೆ ಆಗ್ರಹ: ರೈತರಿಂದ ರಾಣಿ ಚನ್ನಮ್ಮ ವೃತ್ತ ಬಂದ್

ಬೆಳಗಾವಿ: ಕಬ್ಬಿಗೆ ಲಾಭದಾಯಕ ಬೆಲೆ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ನೇತೃತ್ವ) ಇನ್ನೊಂದು‌ ಬಣದ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಲ್ಲಿ ಎರಡು ತಾಸು ಮಾನವ ಸರಪಳಿ ನಿರ್ಮಿಸಿದ ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮೊಳಗಿಸಿದರು.

'2026-27 ನೇ ಸಾಲಿನ ಕಬ್ಬಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ದರದಲ್ಲಿ ಪರಿಷ್ಕರಣೆ ಮಾಡಿ, ಕಬ್ಬು ಬೆಳೆಗಾರರಿಗೆ ಲಾಭದಾಯಕ ಬೆಲೆ ನಿಗದಿ ಮಾಡಬೇಕು. ಈ ವರ್ಷ ಕೂಲಿ ಮತ್ತು ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟು ಆಗಿದ್ದರಿಂದ ಕೇಂದ್ರ ಸರ್ಕಾರ ಎಫ್‌ಆರ್ಪಿ ನಿಗದಿ ಮಾಡಬೇಕು. ಜತೆಗೆ ರಾಜ್ಯ ಸರ್ಕಾರ ಸಹಾಯಧನ ನೀಡಿ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕು' ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕೋಡಿಹಳ್ಳಿ ಚಂದ್ರಶೇಖರ ಒತ್ತಾಯಿಸಿದರು.

'ಬೆಳೆ ಹಾನಿಯಿಂದ ರೈತರು ತತ್ತರಿಸಿದ್ದಾರೆ. ನಿರಂತರ ಸಿಂಗಲ್ ಫೇಸ್ ವಿದ್ಯುತ್ ನೀಡಿ, ವಿದ್ಯುತ್ ಪೂರೈಕೆಯಲ್ಲಿ ಸರ್ಕಾರ ವಿಫಲವಾಗಿದೆ. ತಕ್ಷಣ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಬೆಳೆ ವಿಮೆ ತುಂಬಿದರೂ ಬೆಳೆಹಾನಿ ಪರಿಹಾರ ಸಿಗುತ್ತಿಲ್ಲ. ಹಂದಿ ಮತ್ತು ಕಾಡು ಪ್ರಾಣಿಗಳಿಂದ ಬೆಳೆ ಹಾನಿ ತಡೆಗಟ್ಟಲು ಕ್ರಮ ತೆಗೆದುಕೊಳ್ಳಬೇಕು' ಎಂದು ಆಗ್ರಹಿಸಿದರು.

ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆಕಬ್ಬಿಗೆ ₹5,500 ಬೆಂಬಲ ಬೆಲೆಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಹೋರಾಟ ಮುಂದುವರಿಕೆ

'ಸರ್ಕಾರದ ಬರ ಘೋಷಣೆ ಮಾಡಿದ್ದರೂ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ, ತಕ್ಷಣ ಬೆಳೆ ಹಾನಿ ಪರಿಹಾರ ಜಮೆ ಮಾಡಿ ರೈತರನ್ನು ಕಾಪಾಡಬೇಕು' ಎಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನೆ ಕಾರಣ ರಾಣಿ ಚನ್ನಮ್ಮ ವೃತ್ತ ಸಂಪರ್ಕಿಸುವ ಎಲ್ಲ ಮಾರ್ಗಗಳಲ್ಲೂ ಸಂಚಾರ ದಟ್ಟಣೆ ಉಂಟಾಯಿತು.

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರ ‌ಧರಣಿ

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರ ‌ಧರಣಿ

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರ ‌ಧರಣಿ

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರ ‌ಧರಣಿ

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರ ‌ಧರಣಿ

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರ ‌ಧರಣಿ

Dailyhunt
Disclaimer: This content has not been generated, created or edited by Dailyhunt. Publisher: Prajavani