Wednesday, 05 Aug, 6.00 am ಪ್ರಜಾವಾಣಿ

ವಾಣಿಜ್ಯ ಸುದ್ದಿ
ಕಬ್ಬಿಣದ ಅದಿರು ಉತ್ಪಾದನೆ ಹೆಚ್ಚಳ : ಎನ್‌ಎಂಡಿಸಿ

ಹೈದರಾಬಾದ್‌: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್‌ಎಂಡಿಸಿ) ಜುಲೈನಲ್ಲಿ 21.9 ಲಕ್ಷ ಟನ್‌ ಕಬ್ಬಿಣದ ಅದಿರು ಉತ್ಪಾದಿಸಿದೆ.

ಕೋವಿಡ್‌-19 ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಹಿಂದಿನ ವರ್ಷದ ಜುಲೈಗೆ ಹೋಲಿಸಿದರೆ ಉತ್ಪಾದನೆಯಲ್ಲಿ ಶೇ 13ರಷ್ಟು ಏರಿಕೆ ಸಾಧ್ಯವಾಗಿದೆ. ಮಾರಾಟವು ಶೇ 7ರಷ್ಟು ಹೆಚ್ಚಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

'ಕೋವಿಡ್‌ನಿಂದಾಗಿ ಕಳೆದ ಕೆಲವು ತಿಂಗಳುಗಳು ಉದ್ಯಮವು ಹಲವು ಸವಾಲುಗಳನ್ನು ಎದುರಿಸಬೇಕಾಯಿತು. ಆದರೆ, ಇದನ್ನು ಒಂದು ಅವಕಾಶವನ್ನಾಗಿ ಬಳಸಿಕೊಂಡು ನಮ್ಮ ಉತ್ಪಾದನೆ ಸಾಮರ್ಥ್ಯವನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸಲಾಯಿತು' ಎಂದು ಕಂಪನಿಯ ಅಧ್ಯಕ್ಷ ಸುಮಿತ್‌ ದೇಬ್‌ ತಿಳಿಸಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Prajavani
Top