Dailyhunt Logo
  • Light mode
    Follow system
    Dark mode
    • Play Story
    • App Story
ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ವಿಳಂಬ: ಆರೋಪ

ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ವಿಳಂಬ: ಆರೋಪ

ಚನ್ನರಾಯಪಟ್ಟಣ: 'ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಬಹುತೇಕ ಅಧಿಕಾರಿಗಳನ್ನು ನಿಯೋಜಿಸಿರುವುದರಿಂದ ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿರುವ ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಸಮರ್ಪಕವಾಗಿ ಆಗುತ್ತಿಲ್ಲ. ಜನರ ದೈನಂದಿನ ಕೆಲಸಕ್ಕೆ ತೊಂದರೆಯಾಗುತ್ತಿದೆ' ಎಂದು ಭೂಮಿ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷ ಜಿ.ಎಸ್.ರಾಜ್‍ಕುಮಾರ್ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕಳೆದ ಕೆಲ ತಿಂಗಳಿಂದ ಎಸ್‍ಐ ಆರ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದರಿಂದ ಸಾರ್ವಜನಿಕರ ಕೆಲಸಕ್ಕೆ ತೊಂದರೆಯಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಹಾಸನಾಂಬ ಜಾತ್ರಾಮಹೋತ್ಸವದಲ್ಲಿ ಅಧಿಕಾರಿಗಳನ್ನು ನಿಯೋಜಿಸಿರುವುದರಿಂದ ಕಚೇರಿಗಳಲ್ಲಿ ಕೆಲ ಸಿಬ್ಬಂದಿ ಮಾತ್ರ ಕೆಲಸ ಮಾಡುವಂತಾಗಿದೆ. ಪ್ರತಿ ವರ್ಷ ಇದು ಪುನಾರಾವರ್ತನೆಯಾಗುತ್ತಿದೆ. ಸಾರ್ವಜನಿಕರ ಕೆಲಸ, ಕಾರ್ಯಗಳಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು' ಎಂದು ಈ ಹಿಂದೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ' ಎಂದರು.'ಜಾತ್ರಾ ಮಹೋತ್ಸವದ ಕಾರ್ಯಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವ ಬದಲು, ಸಾರ್ವಜನಿಕರಿಗೆ ದೈನಂದಿನನ ಕೆಲಸಕ್ಕೆ ನೇರ ಸಂಬಂಧಿಸದ ಇತರೆ ಇಲಾಖೆಯ ಅಧಿಕಾರಿಗಳನ್ನು ನೇಮಿಸುವುದು ಸೂಕ್ತ. ಯಾವುದೇ ಕಾರಣಕ್ಕೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಡೆಗಣಿಸಬಾರದು ಎಂಬ ಕಳಕಳಿ ನಮ್ಮದು. ಇದೇ ರೀತಿ ಹಾಸನಾಂಬ ದೇವರ ದರ್ಶನಕ್ಕೆ ಕಲ್ಪಿಸಿರುವ ವಿಶೇಷ ಪಾಸ್ ವ್ಯವಸ್ಥೆ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದೆ. ಗಣ್ಯರಿಗೆ ವಿಶೇಷಪಾಸ್ ನೀಡಬಾರದು. ಗಣ್ಯರು ಸಹ ಜನಸಾಮಾನ್ಯರಂತೆ ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುವಂತಾಗಬೇಕು' ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷೆ ನಾಗರತ್ನಮ್ಮ, ತಾಲ್ಲೂಕು ಘಟಕದ ಅಧ್ಯಕ್ಷ ಮಂಜು, ಭೂಮಿ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರಾದ ಬಿ.ಎನ್. ರಮೇಶ್, ಮಂಜುನಾಥ್, ರವಿ ಭಾಗವಹಿಸಿದ್ದರು.

261104-36-551560680

Dailyhunt
Disclaimer: This content has not been generated, created or edited by Dailyhunt. Publisher: Prajavani