ಚಾಮರಾಜನಗರ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಜುಲೈ 9 ಮತ್ತು 10ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
9 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 3.30ಕ್ಕೆ ಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.
10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ದೀನಬಂಧು ಸಂಸ್ಥೆಗೆ ಭೇಟಿ ನೀಡುವರು. ಬಳಿಕ ಸೋಲಿಗರ ಹಟ್ಟಿ, ಶಾಲೆಗಳಿಗೂ ಭೇಟಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-37-1856181765

