ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ನಾಡಿನಾದ್ಯಂತ ನಡೆಯುತ್ತಿದೆ.
ಧ್ವಜಾರೋಹಣ ನೆರವೇರಿಸಿದ ಸಚಿವ ಕೃಷ್ಣಬೈರೇಗೌಡ,
ತುಮಕೂರು: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ನಂತರ ತೆರೆದ ವಾಹನದಲ್ಲಿ ತೆರಳಿ ತುಕಡಿಗಳ ಪರಿವೀಕ್ಷಣೆ ನಡೆಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ ಹಾಜರಿದ್ದರು.
ರಾಯಚೂರು: ಡಾ.ಅಜಯ್ ಸಿಂಗ್ರಿಂದ ರಾಜ್ಯೋತ್ಸವ ಧ್ವಜಾರೋಹಣ
ರಾಯಚೂರು: ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಸಿಂಗ್ ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಹಾಜರಿದ್ದರು.
ಪಥ ಸಂಚಲನ:
ಕೆಎಸ್ಆರ್ಪಿ, ಜಿಲ್ಲಾ ಸಶಸ್ತ್ರಪಡೆ, ನಾಗರಿಕ ಪೊಲೀಸ್, ಮಹಿಳಾ ಪೊಲೀಸ್, ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಎನ್ಸಿಸಿ ಕೆಡೆಟ್, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾ ದಳ, ಸೇಂಟ್ ಮೇರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು, ಅಕ್ಕ ಕೆಫೆಯ ಸಿಬ್ಬಂದಿ ಆಕರ್ಷಕ ಪಥಸಂಚಲನ ನಡೆಸಿದರು.
ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮಾಡಲಾಯಿತು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮಡಿಕೇರಿಯಲ್ಲಿ ಇನ್ನೂ ಆರಂಭವಾಗದ ರಾಜ್ಯೋತ್ಸವ
ಮಡಿಕೇರಿ: ಇಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭವಾಗಬೇಕಿದ್ದ ಕನ್ನಡ ರಾಜ್ಯೋತ್ಸವ 20 ನಿಮಿಷ ಕಳೆದರೂ ಆರಂಭವಾಗಿಲ್ಲ.
ಸಚಿವ ನರೇಂದ್ರಸ್ವಾಮಿ ಹಾಗೂ ಶಾಸಕ ಡಾ.ಮಂತರ್ ಗೌಡ ಅವರಿಗಾಗಿ ಬಿಸಿಲಿನಲ್ಲಿ ವಿದ್ಯಾರ್ಥಿಗಳು ಕಾಯುತ್ತಾ ನಿಂತಿದ್ದಾರೆ.

ಮೈಸೂರಿನಲ್ಲಿ ರಾಜ್ಯೋತ್ಸವ ಸಂಭ್ರಮ

ಮೈಸೂರು: ನಗರದ ವಿವಿಧೆಡೆ ಭಾನುವಾರ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಓವೆಲ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.
' ಕನ್ನಡದ ವಿಚಾರದಲ್ಲಿ ನನ್ನ ತಂದೆ ಸಿದ್ದರಾಮಯ್ಯ ಅವರೇ ನನಗೆ ಸ್ಪೂರ್ತಿ' ಎಂದ ಅವರು ' ಕನ್ನಡ ಕೇವಲ ನಮ್ಮ ಭಾವನೆಯ ಭಾಷೆ ಆಗದೇ ಜ್ಞಾನ, ಉದ್ಯೋಗ, ವಿಜ್ಞಾನ ಹಾಗೂ ಆಡಳಿತದ ಭಾಷೆಯಾಗಿಯೂ ಬೆಳೆಸಬೇಕಿದೆ ಎಂದು ಆಶಿಸಿದರು.
ಇದೇ ವೇಳೆ 92 ಮಂದಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅರ್ಧಗಂಟೆಯಷ್ಟು ತಡವಾಗಿ ಮಡಿಕೇರಿಯಲ್ಲಿ ಕನ್ನಡ ರಾಜ್ಯೋತ್ಸವ
ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭಾನುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ 9.30ಕ್ಕೆ ಕಾರ್ಯಕ್ರಮ ಆರಂಭವಾಯಿತು. ಪಥಸಂಚಲನಕ್ಕಾಗಿ 8.30 ರಿಂದಲೆ ಮೈದಾನದಲ್ಲಿ ನಿಂತಿದ್ದ ವಿದ್ಯಾರ್ಥಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಬಂದಿದ್ದ ವಿದ್ಯಾರ್ಥಿಗಳು ಬಸವಳಿದರು.
ಶಾಸಕ ಡಾ.ಮಂತರ್ ಗೌಡ,
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಭಾಗವಹಿಸಿದ್ದರು.
ಕನ್ನಡಕ್ಕೆ ಪ್ರಥಮ ಆದ್ಯತೆ ನೀತಿ ಜಾರಿಗೆ ಒತ್ತು: ಶಿವರಾಜ ತಂಗಡಗಿ
ಕೊಪ್ಪಳ: ಕನ್ನಡ ನಾಡಿನಲ್ಲಿ ಮಾತೃಭಾಷೆ ಕನ್ನಡಕ್ಕೆ ಪ್ರಥಮ ಆದ್ಯತೆ ಎಂಬ ನೀತಿಯನ್ನು ನಮ್ಮ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಇದಕ್ಕೆ ಪೂರಕವಾಗಿ ಎಲ್ಲ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ಒತ್ತು ಕೊಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರೂ ಆದ ತಂಗಡಗಿ 71ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ ರಾಜ್ಯದ ಜನ ಈ ನೆಲದ ಭಾಷೆ, ಸಾಹಿತ್ಯ, ಕಲೆ, ಸಂಸ್ಕತಿ ಮತ್ತು ಪರಂಪರೆಯನ್ನು ಸದಾಕಾಲ ಆರಾಧಿಸುವವರು ಎಂದರು.
ಕನ್ನಡಕ್ಕೆ ಪ್ರಥಮ ಆದ್ಯತೆ ನೀತಿ ಜಾರಿಗೆ ಒತ್ತು: ಶಿವರಾಜ ತಂಗಡಗಿಉಡುಪಿ: ಸಂಭ್ರಮದ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸದ ಪ್ರಯುಕ್ತ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಜಿಲ್ಲೆಯ ತ್ರಾಸಿ ಮತ್ತು ಮರವಂತೆ ಬೀಚ್ಗಳಲ್ಲಿ ಲಭ್ಯವಿರುವ 7.07 ಎಕರೆ ಭೂಮಿಯನ್ನು ಬಳಸಿಕೊಂಡು ₹48 ಕೋಟಿ ವೆಚ್ಚದಲ್ಲಿ ಮನೋರಂಜನಾ ಪಾರ್ಕ್ ಹಾಗೂ ಕ್ರೀಡಾ ಚಟುವಟಿಕೆಗಳನ್ನು ರೂಪಿಸಲು ನಿರ್ಧರಿಸಲಾಗಿದೆ ಎಂದರು.
ಉಡುಪಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂದು ಘೋಷಿಸಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.
ಯುವಜನರು ಕನ್ನಡತನ ಅಳವಡಿಸಿಕೊಳ್ಳಿ: ಸಚಿವ ನರೇಂದ್ರಸ್ವಾಮಿ
ಯುವ ಜನರು ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ನಮ್ಮ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.
ಮಡಿಕೇರಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಯುವಜನರು ಕನ್ನಡತನ ಅಳವಡಿಸಿಕೊಳ್ಳಿ: ಸಚಿವ ನರೇಂದ್ರಸ್ವಾಮಿ
ಹೊಸಪೇಟೆಯಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ಕನ್ನಡ ಜೀವ ಇರುವ ಭಾಷೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: '2,500 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಕನ್ನಡ ಬರೀ ಸಂವಹನ ಭಾಷೆಯಲ್ಲ. ಇದು ಜೀವ ಇರುವ ಭಾಷೆ' ಎಂದು ಗೃಹ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಬಣ್ಣಿಸಿದರು.
ನಗರದ ನೆಹರೂ ಗಂಜ್ ಪ್ರದೇಶದ ನಗರೇಶ್ವರ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಭಾನುವಾರ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಭುವನೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
'ಕನ್ನಡಿಗರಿಗೆ ಏಕೀಕರಣ ಹೋರಾಟ ಸ್ವಾತಂತ್ರ್ಯ ಹೋರಾಟದಷ್ಟೇ ಮುಖ್ಯವಾಗಿದೆ. ಕನ್ನಡದಷ್ಟು ವೈವಿಧ್ಯವಾದ ಭಾಷೆ ದೇಶದಲ್ಲಿ ಇನ್ನೊಂದಿಲ್ಲ. ಕನ್ನಡ ಎಂದರೆ, ಕನ್ನಡ ಎಂದರೆ ಅರಿವು, ಕನ್ನಡ ಎಂದರೆ ಆಚಾರ, ಕನ್ನಡವು ಕಲೆ, ಐಕ್ಯತೆ ಒಳಗೊಂಡ ಭಾಷೆ. ಕನ್ನಡ ಸಾಹಿತ್ಯವು ಶಾಸನ ಸಾಹಿತ್ಯ, ವಚನ ಸಾಹಿತ್ಯ, ದಲಿತ ಸಾಹಿತ್ಯ, ಜೈನ ಸಾಹಿತ್ಯ, ನವೋದಯ, ನವ್ಯ ಮಾತ್ರವಲ್ಲದೇ ಬಂಡಾಯ ಸಾಹಿತ್ಯ ಒಳಗೊಂಡಿದೆ' ಎಂದರು.
ರಾಜ್ಯೋತ್ಸವಕ್ಕೆ ಉಸ್ತುವಾರಿ ಸಚಿವ ಬೈರತಿ ಸುರೇಶ್ ಚಾಲನೆ
ಚಿಕ್ಕಬಳ್ಳಾಪುರ: ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.
ಪಿಪಿಎಚ್ ಎಸ್ ಶಾಲೆ, ಶಾಂತಿನಿಕೇತನ ಶಾಲೆ ಸೇರಿದಂತೆ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳ ವಿದ್ಯಾರ್ಥಿಗಳು ನಾಡು ನುಡಿಗೆ ಸಂಬಂಧಿಸಿದ ಗೀತೆಗಳಿಗೆ ನೃತ್ಯ ಮಾಡಿದರು.
ವಿವಿಧ ಕ್ಷೇತ್ರಗಳ 71 ಸಾಧಕರನ್ನು ಸನ್ಮಾನಿಸಲಾಯಿತು.
ಬೈರತಿ ಸುರೇಶ್ ಮಾತನಾಡಿ, ಕನ್ನಡ ಭಾಷೆಯು ನಮ್ಮ ನಡೆ-ನುಡಿ, ಆಚಾರ-ವಿಚಾರ, ಸಂಸ್ಕೃತಿ, ಅಭಿಮಾನ ಮತ್ತು ಅಸ್ಮಿತೆಯ ಪ್ರತೀಕವಾಗಿದೆ ಎಂದರು.
ರಾಜ್ಯೋತ್ಸವಕ್ಕೆ ಉಸ್ತುವಾರಿ ಸಚಿವ ಬೈರತಿ ಸುರೇಶ್ ಚಾಲನೆ: 71 ಸಾಧಕರಿಗೆ ಸನ್ಮಾನರಾಜ್ಯೋತ್ಸವ ಸಂಭ್ರಮ: ಆಕರ್ಷಕ ಪಥಸಂಚಲನ

ಗದಗದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಧ್ಬಜಾರೋಹಣ ನೆರವೇರಿಸಿದರು. ತೆರೆದ ವಾಹನದಲ್ಲಿ ಕ್ರೀಡಾಂಗಣದ ಸುತ್ತ ಪ್ರದಕ್ಷಿಣೆ ಹಾಕಿ, ವಂದನೆ ಸಲ್ಲಿಸಿದರು. ನಂತರ
ನಡೆದ ಆಕರ್ಷಕ ಪಥ ಸಂಚಲನದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ಪಡೆ, ಗೃಹರಕ್ಷಕ ದಳ, ಅಗ್ನಿಶಾಮಕದಳ, ಅರಣ್ಯ ರಕ್ಷಕ ಪಡೆ ಮಾಜಿ ಸೈನಿಕರ ಸಂಘ, ಎನ್ ಸಿಸಿ, ಸ್ಕೌಡ್ಸ್-ಗೈಡ್ಸ್ ತಂಡ, ಭಾರತ ಸೇವಾದಳ ಸೇರಿದಂತೆ ವಿವಿಧ ಶಾಲೆಗಳ 21 ತಂಡಗಳು ಪಾಲ್ಗೊಂಡಿದ್ದವು.
ಸಚಿವ ಬಸವರಾಜ ರಾಯರಡ್ಡಿ ಹಾಗೂ ಅಧ್ಯಕ್ಷತೆ ವಹಿಸಿದ್ದ ಎಚ್.ಕೆ. ಪಾಟೀಲ ಅವರು ರಾಜ್ಯೋತ್ಸವದ ಸಂದೇಶ ನೀಡಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಇದಕ್ಕೂ ಮುನ್ನ ವಿವಿಧ ಇಲಾಖೆಗಳು ಹಾಗೂ ಶಾಲಾ-ಕಾಲೇಜುಗಳ ಸ್ತಬ್ದಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಯಿತು.
ವಿಜಯಪುರದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ವಿಜಯಪುರ: ವಿಜಯಪುರ ಜಿಲ್ಲಾಡಳಿತವು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಸಚಿವ ಎಂ.ಬಿ.ಪಾಟೀಲ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕನ್ನಡ ಭಾಷೆಯನ್ನು ಎಲ್ಲ ಕ್ಷೇತ್ರದಲ್ಲಿ ಕಡ್ಡಾಯವಾಗಿ ಮತ್ತು ಸಮರ್ಪಕವಾಗಿ ಬಳಸುವಂತೆ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದರು.
ಸುಂದರ ಕನ್ನಡ ನಾಡಿನ ಶ್ರೇಷ್ಠತೆಯನ್ನು ಎತ್ತಿ ಹಿಡಿಯುವುದರೊಂದಿಗೆ ಭಾರತ ಮಾತೆಯ ಕೀರ್ತಿಯನ್ನು ಹೆಚ್ಚಿಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ಬರದ ಪರಿಣಾಮ ಎದುರಿಸಲು ಸಜ್ಜಾಗೋಣ ಎಂದ ಖಾದರ್
ಕನ್ನಡ ರಾಜ್ಯೋತ್ಸವ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳಿಕ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, 'ಈ ವರ್ಷ ಮಳೆ ಸರಿಯಾಗಿ ಬಂದಿಲ್ಲ. ಜನವರಿಯಲ್ಲೇ ಕುಡಿಯುವ ನೀರಿನ ಸಮಸ್ಯೆ, ಬಿಸಿಲಿನ ಝಳ ಹೆಚ್ಚುವ ಲಕ್ಷಣಗಳಿವೆ. ಹವಾಮಾನ ವೈಪರೀತ್ಯದ ಪರಿಣಾಮ ಎದುರಿಸಲು ಸನ್ನದ್ದವಾಗಬೇಕಿದೆ' ಎಂದರು.
ತುಳು ಭಾಷೆಯನ್ನು ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ಖಾದರ್, 'ಇದು ತುಳುನಾಡಿಗೆ ಸಿಕ್ಕಿದ ಗೌರವ' ಎಂದರು.
ದಕ್ಷಿಣ ಕನ್ನಡದಲ್ಲಿರಾಜ್ಯೋತ್ಸವ: ಬರದ ಪರಿಣಾಮ ಎದುರಿಸಲು ಸಜ್ಜಾಗೋಣ ಎಂದ ಖಾದರ್ಸಿಎ ಡಿ ಕೆ ಶಿವಕುಮಾರ್ ಅವರು ವಿಧಾನಸೌಧ ಆವರಣದಲ್ಲಿನ ಭುವನೇಶ್ವರಿ ದೇವಿ ಪ್ರತಿಮೆಗೆ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಭಾನುವಾರ ಪುಷ್ಪಾರ್ಚನೆ ಮಾಡಿದರು. ಸಚಿವರಾದ ಮಧುಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಇನ್ನಿತರರು ಉಪಸ್ಥಿತರಿದ್ದರು.





ಯಾದಗಿರಿಯಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಎಸ್ಪಿ ಪೃಥ್ವಿಕ್ ಶಂಕರ್ ಅವರು ಗೌರವ ಸಲ್ಲಿಸಿದರು
ವಚನ ಮತ್ತು ದಾಸ ಸಾಹಿತ್ಯ ಕನ್ನಡ ಭಾಷೆಯ ಕಣ್ಣುಗಳು: ಡಾ.ಶರಣಪ್ರಕಾಶರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಚಿವ ಕೆ.ಜೆ.ಜಾರ್ಜ್ ಗೈರು
ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರ ಗೈರು ಹಾಜರಿಯಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಧ್ವಜಾರೋಹಣ ನೆರವೇರಿಸಿದರು.
ಅನಾರೋಗ್ಯದ ಕಾರಣ ಕೆ.ಜೆ.ಜಾರ್ಜ್ ಅವರು ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ. ಭಂವರ್ ಸಿಂಗ್ ಮೀನಾ ಅವರು ಧ್ವಜಾರೋಹಣದ ನಂತರ ಧ್ವಜ ವಂದನೆ ಸ್ವೀಕರಿಸಿ ರಾಜ್ಯೋತ್ಸವ ಸಂದೇಶ ನೀಡಿದರು.
ಪೊಲೀಸ್, ಗೃಹ ರಕ್ಷಕ, ಅರಣ್ಯ ಇಲಾಖೆ, ಎನ್ಸಿಸಿ, ವಿಧ್ಯಾರ್ಥಿಗಳು ಸೇರಿ 23 ತಂಡಗಳು ಪಥ ಸಂಚಲನ ನಡೆಸಿದವು. ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಗಾಯತ್ರಿ ಶಾಂತೇಗೌಡ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರ ಗೈರು ಹಾಜರಿಯಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಧ್ವಜಾರೋಹಣ ನೆರವೇರಿಸಿದರು.
ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ
ಅಭಿವೃದ್ಧಿ ವಿಷಯದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂದು ಆರೋಪಿಸಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಉದ್ದೇಶಿಸಿದ್ದ ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಪಾಟೀಲ ನರಿಬೋಳ ಸೇರಿ ಹಲವು ಮುಖಂಡರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ: ಹೋರಾಟಗಾರರ ವಶಕ್ಕೆ ಪಡೆದು ಬಿಡುಗಡೆಕರಾಳ ದಿನ ಆಚರಿಸಿದ ಎಂಇಎಸ್
ಬೆಳಗಾವಿ: ಜಿಲ್ಲಾಡಳಿತದಿಂದ ಅನುಮತಿ ಸಿಗದಿದ್ದರೂ, ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನವನ್ನು ಮಹಾರಾಷ್ಟ್ರ ಏಕೀಕರಣ ಸಮಿತಿಯವರು(ಎಂಇಎಸ್) ನಗರದಲ್ಲಿ ಭಾನುವಾರ ಆಚರಿಸಿದರು.
ಇಲ್ಲಿನ ಮಹಾದ್ವಾರ ರಸ್ತೆಯ ಸಂಭಾಜಿ ಉದ್ಯಾನದಿಂದ ಶಹಾಪುರದ ಎಸ್ಪಿಎಂ ರಸ್ತೆ, ಮಹಾತ್ಮಫುಲೆ ರಸ್ತೆ, ಬಸವೇಶ್ವರ ವೃತ್ತದ ಮಾರ್ಗವಾಗಿ ಸಾಗಿ ರೈಲ್ವೆ ಮೇಲ್ಸೇತುವೆ ಬಳಿ ಇರುವ ಮರಾಠ ಮಂದಿರ ಕಲ್ಯಾಣ ಮಂಟಪದವರೆಗೆ ರ್ಯಾಲಿ ನಡೆಸಿದರು.
'ಬೆಳಗಾವಿ, ಖಾನಾಪುರ, ಬೀದರ್, ಭಾಲ್ಕಿ, ಕಾರವಾರ, ನಿಪ್ಪಾಣಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ' ಎಂದು ಘೋಷಣೆ ಕೂಗಿ, ತಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿದರು.
ಕರ್ನಾಟಕ ರಾಜ್ಯೋತ್ಸವ: ಅನುಮತಿ ಇಲ್ಲದೆಯೂ ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಿದ MESಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲೇ ತಡೆ
ನಿಪ್ಪಾಣಿ(ಬೆಳಗಾವಿ ಜಿಲ್ಲೆ): ಬೆಳಗಾವಿಯಲ್ಲಿ ನಡೆದ ಕರಾಳ ದಿನಾಚರಣೆಯಲ್ಲಿ ಭಾಗವಹಿಸಲು ಮಹಾರಾಷ್ಟ್ರದ ಕೊಲ್ಹಾಪುರದಿಂದ ಆಗಮಿಸುತ್ತಿದ್ದ ಶಿವಸೇನಾ ಕಾರ್ಯಕರ್ತರನ್ನು ತಾಲ್ಲೂಕಿನ ಕೊಗನೊಳ್ಳಿ ಚೆಕ್ಪೋಸ್ಟ್ ಬಳಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ರಾಜ್ಯದ ಪೊಲೀಸರು ತಡೆದರು.
ಶಿವಸೇನಾ(ಉದ್ಧವ್ ಠಾಕ್ರೆ ಬಣ) ಕೊಲ್ಹಾಪುರ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ದೇವಣೆ ನೇತೃತ್ವದಲ್ಲಿ 50ಕ್ಕೂ ಅಧಿಕ ಕಾರ್ಯಕರ್ತರು ಬೆಳಗಾವಿಗೆ ಹೊರಟಿದ್ದರು. ಅವರು ಗಡಿಯಲ್ಲೇ ತಡೆದು, ಕೊಲ್ಹಾಪುರ ಜಿಲ್ಲೆಯ ಕಾಗಲ್ ಠಾಣೆ ಪೊಲೀಸರಿಗೆ ಒಪ್ಪಿಸಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿನದತ್ತ ದೇಸಾಯಿ ನಿಧನ

ಬೆಳಗಾವಿ: 2017ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ, ಇಲ್ಲಿನ ಭರತೇಶ್ ಎಜುಕೇಶನ್ ಟ್ರಸ್ಟ್ನ ಮಾಜಿ ಅಧ್ಯಕ್ಷ ಜಿನದತ್ತ ದೇಸಾಯಿ (93) ಅವರು ಭಾನುವಾರ ನಿಧನರಾದರು.
1966ರಿಂದ 1991ರವರೆಗೆ ಬೆಳಗಾವಿ ಜಿಲ್ಲಾ ನ್ಯಾಯಾಧೀಶರಾಗಿದ್ದರು. ಪ್ರಾಯದಲ್ಲಿ ಕವಿಯಾಗಿದ್ದ ಅವರು ನ್ಯಾಯಾಧೀಶರಾದ ಬಳಿಕ ಸಾಹಿತ್ಯ ತ್ಯಜಿಸಿದ್ದರು. ನಿವೃತ್ತರಾದ ಬಳಿಕ 'ಮತ್ತೆ ಬಂದಿದ್ದೇನೆ' ಎಂಬ ಕೃತಿಯ ಮೂಲಕ ಸಾಹಿತ್ಯ ಲೋಕ ಪ್ರವೇಶಿಸಿದ್ದರು. 18 ಸಂಕಲನಗಳನ್ನು ಅವರು ನಾಡಿಗೆ ನೀಡಿದ್ದಾರೆ.
ಸಚಿವ ಸಂತೋಷ್ ಲಾಡ್ ಕಾರು ಚಲಾಯಿಸಿದ ಜಿಲ್ಲಾಧಿಕಾರಿ ಸ್ನೇಹಲ್ !

ಧಾರವಾಡ: ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಜಿಲ್ಲಾ ಸಾಹಿತ್ಯ ಭವನ ಆವರಣದಿಂದ ಜಿಲ್ಲಾಧಿಕಾರಿ ಸ್ನೇಹಲ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಕಾರು ಚಲಾಯಿಸಿಕೊಂಡು ಸಚಿವ, ಇತರ ಅಧಿಕಾರಿಗಳೊಂದಿಗೆ ತೆರಳಿದರು.
ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ಮುಗಿಸಿದ ಬಳಿಕ ಸಚಿವರ ಕಾರಿನಲ್ಲಿ ಅವರು ತೆರಳಿದರು. ಸಾಹಿತ್ಯ ಭವನ ಆವರಣದಿಂದ ಕೆಸಿಡಿ ವೃತ್ತ, ಜರ್ಮನ್ ಆಸ್ಪತ್ರೆ ವೃತ್ತ ಮಾರ್ಗವಾಗಿ ಹಾದು ಜಿಲ್ಲಾಧಿಕಾರಿ ನಿವಾಸ ಮುಂಭಾಗದವರೆಗೆ ಸಂಚರಿಸಿದರು.

